Exclusive: ಅಂಬಿಡೆಂಟ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ-ವೈರಲ್ ಆಗಿರೋ ಫೋಟೋ ಬಗ್ಗೆ ಗಣಿ ಧಣಿಯ ಮಾತು

ಬೆಂಗಳೂರು: ಸಿಸಿಬಿ ಕಚೇರಿಗೆ ಆಗಮನಕ್ಕೂ ಮುನ್ನ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಅಂಬಿಡೆಂಟ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ರಾಜಕೀಯ ಷಡ್ಯಂತ್ರಗಳಿಂದ ನನ್ನ ಮೇಲೆ ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಒಂದು ವಾರದಿಂದ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ. ಸುಮ್ಮನೇ ನಾನು ಅಲ್ಲಿದ್ದೇನೆ, ಇಲ್ಲಿದ್ದೇನೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇಷ್ಟು ದೊಡ್ಡ ಮಹಾನಗರ ಬಿಟ್ಟು ಎಲ್ಲಿಯೂ ಹೋಗಿಲ್ಲ. ತಲೆಮರೆಸಿಕೊಳ್ಳುವ ಅಗತ್ಯವೂ ನನಗಿಲ್ಲ. ಸಿಸಿಬಿ ಕಚೇರಿಯಿಂದ ಯಾವುದೇ ನೋಟಿಸ್ ಬಂದಿರಲಿಲ್ಲ. ಶುಕ್ರವಾರ ನೋಟಿಸ್ ಬಂದಿದ್ದರಿಂದ ಇಂದು ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಅಂಬಿಡೆಂಟ್ ಕಂಪನಿ ಮಾಲೀಕ ಫರೀದ್ ಎಲ್ಲ ರಾಜಕೀಯ ನಾಯಕರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಬೆಂಗಳೂರಿನ ರೆಡ್ಡಿ ಸಮುದಾಯದ ನಾಯಕರೊಬ್ಬರು ಆತನನ್ನು ಪರಿಚಯಿಸಿದ್ದರು. ನನ್ನ ಮೇಲೆ ಆರೋಪಗಳೆಲ್ಲವೂ ರಾಜಕೀಯ ಹುನ್ನಾರ ಎಂದು ಕಿಡಿಕಾರಿದರು.

ಈ ಮೊದಲು ವಿಡಿಯೋ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ಜನಾರ್ದನ ರೆಡ್ಡಿ, ಕಳೆದ ನಾಲ್ಕು ದಿನಗಳಿಂದ ನನ್ನ ಬಗ್ಗೆ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದವು. ಈ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕೆಂದು ವಕೀಲರ ಸಲಹೆಯ ಮೇರೆಗೆ ಈ ವಿಡಿಯೋವನ್ನು ಮಾಡಿದ್ದೇನೆ. ಪೊಲೀಸರು ಕೆಟ್ಟ ಉದ್ದೇಶದಿಂದ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಸಿಸಿಬಿ ಕಚೇರಿಗೆ ಹೋಗಿ ಸ್ಪಷ್ಟನೆ ನೀಡಲು ತೀರ್ಮಾನಿಸಿದಾಗ, ವಕೀಲರು ನಮಗೆ ಯಾವುದೇ ನೋಟಿಸ್ ನೀಡಿಲ್ಲ ಮತ್ತು ಎಫ್‍ಐಆರ್ ನಲ್ಲಿ ನಿಮ್ಮ ಹೆಸರಿಲ್ಲ. ಯಾವ ಕಾರಣಕ್ಕಾಗಿ ಸಿಸಿಬಿಗೆ ಹೋಗಬೇಕೆಂದು ಹೇಳಿದ್ದರು ಅಂತಾ ಅಂದ್ರು.

ಈ ಮೊದಲು ವಕೀಲ ಚಂದ್ರಶೇಖರ್ ಮಾತನಾಡಿ, ಅಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಜನಾರ್ದನ ರೆಡ್ಡಿಯವರ ಹೆಸರನ್ನು ಪ್ರಸ್ತಾಪಿಸಿದ್ದರು. ಅಲ್ಲದೇ ಅದೇ ಪೊಲೀಸ್ ಪ್ರಕರಟಣೆಯಲ್ಲಿ ರೆಡ್ಡಿ ವಿರುದ್ಧ ಕೆಲವೊಂದು ಆರೋಪಗಳನ್ನು ಕೂಡ ಮಾಡಿದ್ದರು. ಆದ್ರೆ ಅವೆಲ್ಲವೂ ಸತ್ಯಕ್ಕೆ ದೂರವಾದದ್ದಾಗಿದೆ. ವಿನಾಕಾರಣ ಸಿಸಿಬಿಯವರು ಜನಾರ್ದನ ರೆಡ್ಡಿ ಮೇಲೆ ಆರೋಪ ಮಾಡಿದ್ದಾರೆ. ಆದ್ರೆ ಸಿಸಿಬಿ ನೋಟಿಸ್ ಜಾರಿ ಮಾಡಲಿಲ್ಲ. ಹೀಗಾಗಿ ನೀವು ನೋಟಿಸ್ ಜಾರಿ ಮಾಡಿ ಅಂತ ಕೇಳಿಕೊಂಡಿದ್ದೆವು. ನೋಟಿಸ್ ಜಾರಿ ಮಾಡದೇ ನಾವು ವಿಚಾರಣೆಗೆ ಹಾಜರಾಗುವುದ ಹೇಗೆ ಅಂತ ಪ್ರಶ್ನಿಸಿದ್ದೆವು. ಹೀಗಾಗಿ ಇದೀಗ ಸಿಸಿಬಿ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸದ್ಯ ನಾವು ಸಿಸಿಬಿಗೆ ಹಾಜರಾಗುತ್ತೇವೆ. ಈ ಕೇಸ್ ನಲ್ಲಿ ಪ್ರತಿ ಹಂತದಲ್ಲಿಯೂ ವಿಚಾರಣೆಗೆ ಸಂಪೂರ್ಣವಾಗಿ ಸಿದ್ಧರಿದ್ದೇವೆ. ಒಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಅಂತ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *