ಪ್ರೆಷರ್ ಕುಕ್ಕರ್ ಕಂಪನಿಯಲ್ಲಿ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ

ರಾಮನಗರ: ಪ್ರೆಷರ್ ಕುಕ್ಕರ್ ತಯಾರಿಕಾ ಕಂಪೆನಿಯೊಂದರಲ್ಲಿ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಸೇರಿದಂತೆ 13 ಜನ ಕಾರ್ಮಿಕರು ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರದ ಹಾರೋಹಳ್ಳಿಯಲ್ಲಿ ನಡೆದಿದೆ.

ಹಾರೋಹಳ್ಳಿಯ ಸ್ಟೌವ್ ಕ್ರಾಫ್ಟ್ ಎಂಬ ಪ್ರೆಷರ್ ಕುಕ್ಕರ್ ತಯಾರಿಕಾ ಕಂಪೆನಿಯಲ್ಲಿ ಈ ಅವಘಡ ಸಂಭವಿಸಿದ್ದು, ಗಾಯಾಳುಗಳಲ್ಲಿ ಲತಾ, ವರ್ಷಾ, ವಿನೋದ್, ಸಿದ್ದಲಿಂಗಯ್ಯ ಎಂಬವರು ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆಗಿದ್ದೇನು?:
ಹಾರೋಹಳ್ಳಿಯ ಸ್ಟೌವ್ ಕ್ರಾಫ್ಟ್ ಕಂಪೆನಿಯ ಆರ್‌ಸಿ ಯೂನಿಟ್ ಕೊಠಡಿಯಲ್ಲಿದ್ದ ಅಲ್ಯುಮಿನಿಯಮ್ ಕರಗಿಸುವ ಬಾಯ್ಲರ್ ದುರಸ್ತಿಗೊಂಡಿತ್ತು. ಹೀಗಾಗಿ ಅದನ್ನು ಇಂದು ಸರಿ ಮಾಡಿ, ಮತ್ತೆ ಕೆಲಸ ಪ್ರಾರಂಭಿಸಲಾಗಿತ್ತು. ಆದರೆ ಏಕಾಏಕಿ ಅಲ್ಯುಮಿನಿಯಮ್ ಕರಗಿಸುವ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಭಾರೀ ಅನಾಹುತವೇ ಸಂಭವಿಸಿದೆ. ಕೊಠಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರ ಸ್ಥಿತಿ ಚಿಂತಾನಕವಾಗಿದ್ದು, ಉಳಿದಂತೆ 9 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಸೂಪರಿಂಟೆಂಡೆಂಟ್ ಸತೀಶ್ ತಿಳಿಸಿದ್ದಾರೆ.

ಆಸ್ಪತ್ರೆಯ ಮುಂದೆ ಗಾಯಾಳುಗಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಕಾರ್ಮಿಕರು ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದರು. ಈ ಘಟನೆಯ ಕುರಿತು ಕನಕಪುರದ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *