ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.

ಹನೀಫ್ (30) ಕೊಲೆಯಾದ ಯುವಕನಾಗಿದ್ದಾನೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದಗಣಿ ಪಟ್ಟಣದಲ್ಲಿ ಹಾಡಹಗಲೇ ಯುವಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಿಂದ ಯುವಕನ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಟ್ಟಿ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜನ್ಮದಿನಾಚರಣೆಯ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್

 

ಆಟೋಮೊಬೈಲ್ ಅಂಗಡಿ ನಡೆಸುತ್ತಿದ್ದ ಹನೀಫ್ ಜೊತೆ ಕೆಲ ಮೆಕಾನಿಕ್‍ಗಳು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದರು. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *