ಸುಮಲತಾ ಹೆಸರಲ್ಲಿ ನಕಲಿ ಖಾತೆ

-ಅಂಬಿ ನಮನ ಕಾರ್ಯಕ್ರಮದ ಫೋಟೋ ಹಾಕಿ Feeling Loved ಅಂದ ಕಿಡಿಗೇಡಿಗಳು

ಬೆಂಗಳೂರು: ಸುಮಲತಾ ಅಂಬರೀಶ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು, ಈ ಕುರಿತು ಸ್ವತಃ ಸುಮಲತಾ ಅವರೇ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಿ ಎಂದು ತಿಳಿಸಿದ್ದಾರೆ.

ನನ್ನ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ಆರಂಭಿಸಲಾಗಿದೆ. ಇದರಲ್ಲಿ ನನ್ನ ಹೆಸರನ್ನು ಬಳಕೆ ಮಾಡಿಕೊಂಡು ಪೋಸ್ಟ್ ಮಾಡಲಾಗುತ್ತಿದ್ದು, ಯಾರು ಇಂತಹ ಖಾತೆಯಿಂದ ಬರುವ ಸಂದೇಶ ಹಾಗೂ ಮನವಿಗಳನ್ನು ಸ್ವೀಕರಿಸಬೇಡಿ. ನನ್ನ ಹೆಸರಿನಲ್ಲಿ ಒಂದು ಖಾತೆ ಮಾತ್ರವೇ ಇದೇ ಎಂದು ಸ್ಪಷ್ಟಪಡಿಸಿ ಟ್ವೀಟ್ ಮಾಡಿದ್ದಾರೆ.

ನಕಲಿ ಖಾತೆಯನ್ನು ಆರಂಭಿಸಿರುವ ಕಿಡಿಗೇಡಿಗಳು ಮಂಡ್ಯದಲ್ಲಿ ನಡೆದ ಅಂಬಿ ನಮನ ಕಾರ್ಯಕ್ರಮದಲ್ಲಿ ಸೆರೆ ಹಿಡಿದಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಫೋಟೋ ಬಗ್ಗೆ Feeling Loved ಎಂದು ಬರೆದಿದ್ದಾರೆ. ನಕಲಿ ಖಾತೆಯ ಸ್ಕ್ರೀನ್ ಶಾರ್ಟ್ ಫೋಟೋವನ್ನು ಸುಮಲತಾ ಅವರು ಟ್ವೀಟ್ ಮಾಡಿದ್ದಾರೆ.

ಸುಮಲತಾ ಅವರ ಮನವಿಗೆ ಹಲವರು ಪ್ರತಿಕ್ರಿಯೆ ನೀಡಿದ್ದು, ಇಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ಅಂಬರೀಶ್ ಅವರ ಸಾವಿನ ಕುರಿತು ಕೆಲ ನಕಲಿ ಫೇಸ್‍ಬುಕ್ ಖಾತೆಗಳಿಂದ ಪ್ರಚೋದನಾಕಾರಿಯಾಗಿ ಪೋಸ್ಟ್ ಮಾಡಲಾಗಿತ್ತು. ಅಲ್ಲದೇ ಅಂಬಿ ಅವರ ಬಗ್ಗೆ ಕೀಳು ಮಟ್ಟದ ಭಾಷೆಯನ್ನು ಬಳಸಿ ನಿಂದಿಸಿದ್ದರು. ಈ ಕುರಿತು ಸೈಬರ್ ಕ್ರೈಂ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *