ಸಾಂದರ್ಭಿಕ ಚಿತ್ರ
ಬೆಂಗಳೂರು: ಖಚಿತ ಮಾಹಿತಿ ಮೇರೆಗೆ ಮುಂಬೈನ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ನಗರದ ಎರಡು ಕಡೆ ದಾಳಿ ನಡೆಸಿ ಸುಮಾರು 7 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀರಾಮಪುರ ಹಾಗೂ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಆಲೂರಿನಲ್ಲಿ ಖಚಿತ ಮಾಹಿತಿ ಮೇರೆಗೆ ಮುಂಬೈನ ಎನ್‍ಐಎ ಹಾಗೂ ಸ್ಥಳೀಯ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ದಾಳಿ ಮಾಡಿ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಜಿದ್ ಅಲಿ, ಎಂ.ಜಿ. ರಾಜು ಹಾಗೂ ಗಂಗಾಧರ್ ಕೋಲ್ಕರ್ ಬಂಧಿತ ಆರೋಪಿಗಳಾಗಿದ್ದು, ಇವರು ಬಾಂಗ್ಲಾದೇಶದಿಂದ ಕಳ್ಳಸಾಗಣೆ ಮೂಲಕ ನಕಲಿ ನೋಟುಗಳನ್ನು ತಮ್ಮ ನಿವಾಸಗಳಲ್ಲಿ ಶೇಖರಿಸಿಟ್ಟುಕೊಂಡಿದ್ದರು ಎಂದು ಎನ್‍ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ಶ್ರೀರಾಮಪುರ ಹಾಗೂ ಮಾನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Leave a Reply