ಯಾದಗಿರಿ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವಾಗ ನಕಲಿ ವಿದ್ಯಾರ್ಥಿ ಸಿಕ್ಕಿಬಿದ್ದು ಪರಾರಿಯಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಸರಕಾರಿ ಪಿಯು ಪರೀಕ್ಷೆ ಕೇಂದ್ರದಲ್ಲಿ ನಡೆದಿದೆ.
ಕಕ್ಕೇರಾ ಪಟ್ಟಣದ ಪಿಯು ಕಾಲೇಜ್‍ನ ವಿದ್ಯಾರ್ಥಿ ಸೋಮನಾಥ್ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಸೋಮನಾಥನ ಹೆಸರಿನಿಂದ ಬೇರೆ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆಯುತ್ತಿದ್ದನು. ಬಳಿಕ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದು ಪರಾರಿಯಾಗಿದ್ದಾನೆ.

ನಕಲಿ ವಿದ್ಯಾರ್ಥಿ ಒಂದು ಗಂಟೆಗಳ ಕಾಲ ಪರೀಕ್ಷೆ ಬರೆದಿದ್ದಾನೆ. ಪರೀಕ್ಷೆ ಕೇಂದ್ರದ ಮೇಲ್ವಿಚಾರಕರು ತಪಾಸಣೆ ಮಾಡುವಾಗ ನಕಲಿ ವಿದ್ಯಾರ್ಥಿಯ ಕಳ್ಳಾಟ ಬೆಳಕಿಗೆ ಬಂದಿದೆ. ತಕ್ಷಣ ನಕಲಿ ವಿದ್ಯಾರ್ಥಿ ಹಾಲ್ ಟಿಕೆಟ್ ಕೊಟ್ಟು ಪರಾರಿಯಾಗಿದ್ದಾನೆ. ಹಾಲ್ ಟಿಕೆಟ್‍ನಲ್ಲಿ ಸೋಮನಾಥನ ಫೋಟೋ ಬದಲಾಯಿಸಲಾಗಿದೆ.
ಸದ್ಯ ಹುಣಸಗಿ ಪೊಲೀಸರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply