ಸಿದ್ದರಾಮಯ್ಯ ವಿರುದ್ಧ ಸುಳ್ಳು ಆಪಾದನೆ ಮಾಡ್ತಿದ್ದಾರೆ, ನಾವು ಸಿಎಂ ಜೊತೆ ನಿಲ್ಲಬೇಕು: ಕೆಎನ್ ರಾಜಣ್ಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ. ಪರಿಶಿಷ್ಟ ಪಂಗಡಗಳ (ST) ಸಮುದಾಯ ಸಿಎಂ ಸಿದ್ದರಾಮಯ್ಯ ಪರ ನಿಲ್ಲಬೇಕು ಎಂದು ಸಚಿವ ಕೆಎನ್ ರಾಜಣ್ಣ (KN Rajanna) ಸಮುದಾಯದ ಜನರಿಗೆ ಕರೆ ನೀಡಿದರು.

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ (Valmiki Jayanthi) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. 2014-15ರಲ್ಲಿ ಆಂಧ್ರಪ್ರದೇಶ ಹೊರತುಪಡಿಸಿ ನಮ್ಮ ರಾಜ್ಯದಲ್ಲಿ ಮಾತ್ರ SCSP-TSP ಕಾಯ್ದೆ ಜಾರಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಮತ್ತು ಆಂಜನೇಯಗೆ ಸಲ್ಲಬೇಕು. ಅಲ್ಲಿಂದ ಇಲ್ಲಿಯವರೆಗೆ 86 ಸಾವಿರ ಕೋಟಿ ಹಣ ಈ ಸಮುದಾಯದ ಜನರಿಗೆ ಅಭಿವೃದ್ಧಿಗೆ ಮೀಸಲು ಇರಿಸಲಾಗಿದೆ. ನಾವು ಸಿದ್ದರಾಮಯ್ಯಗೆ ಋಣಿಯಾಗಿ ಇರಬೇಕು. ಅವರಿಗೆ ಬೆಂಬಲ ಕೊಡಬೇಕು ಎಂದರು. ಇದನ್ನೂ ಓದಿ: ಹಾಲಿನ ದರ ಏರಿಕೆ ಆಗುತ್ತಾ? – ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?

ಸಿದ್ದರಾಮಯ್ಯ ಮೇಲೆ ಸುಳ್ಳು ಆಪಾದನೆ ತಂದಿದ್ದಾರೆ. ನಾವು ಸಿದ್ದರಾಮಯ್ಯ ಪರ ನಿಲ್ಲಬೇಕು. ಬಡವರ ಪರ ಕೆಲಸ ಮಾಡೋ ನಾಯಕನಿಗೆ ಅಪವಾದ ತರುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮೇಲೆ ಅಪವಾದ ತರುವವರಿಗೆ ಮುಂದಿನ ದಿನಗಳಲ್ಲಿ ನಾವು ಪಾಠ ಕಲಿಸಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್- ಎ13 ಆರೋಪಿ ದೀಪಕ್ ರಿಲೀಸ್

ಪರಿಶಿಷ್ಟ ಪಂಗಡದ ಸಮುದಾಯದವರು ವಿದ್ಯಾವಂತರಾಗಬೇಕು. ಈ ಮೂಲಕ ರಾಜಕೀಯ ಪ್ರಾತಿನಿಧ್ಯ ಪಡೆಯಲು ಮುಂದಾಗಬೇಕು. ಪಟ್ಟಭದ್ರ ಹಿತಾಸಕ್ತಿಗಳ ಪಿತೂರಿ ಹಿಮ್ಮೆಟ್ಟಿಸುವ ಕೆಲಸ ನಾವು ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ: ಸೋಮಣ್ಣ