ಚಾಮರಾಜನಗರ: ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಇಬ್ಬರು ಮಹಿಳೆಯರು, ಒಬ್ಬ ಬಾಲಕ, ಇಬ್ಬರು ಪುರುಷರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ರಾತ್ರಿ ಈ ಕುಟುಂಬ ಮೈಸೂರಿನಿಂದ ಬಂದಿದ್ದರು. ಮೈಸೂರಿನಿಂದ ಬಂದು ಗುಂಡ್ಲುಪೇಟೆ ನಂದಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು.

ಓಂ ಪ್ರಕಾಶ್ ಹೆಸರಿನಲ್ಲಿ ರೂಂ ಬುಕ್ ಮಾಡಲಾಗಿತ್ತು. ಇಂದು ಬೆಳಗ್ಗಿನ ಜಾವ ಪಟ್ಟಣದ ಹೊರವಲಯಕ್ಕೆ ಬಂದು ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿಷಯ ತಿಳಿದು ಬಂದಿಲ್ಲ.
ಸದ್ಯ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply