ಖ್ಯಾತ ನಟ ಅರುಣ್ ಬಾಲಿ ನಿಧನ: ಅಗಲಿದ ಕಲಾವಿದನಿಗೆ ಕಂಬನಿ

ಬಾಲಿವುಡ್ ಖ್ಯಾತ ನಟ ಅರುಣ್ ಬಾಲಿ (Arun Bali) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬಾಲಿ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ಇವರ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದು, ಕಿರು ಹಾಗೂ ಹಿರಿ ತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ.

79ನೇ ವಯಸ್ಸಿನ ಅರುಣ್ ಬಾಲಿ ಸಿನಿಮಾ ರಂಗದಲ್ಲಿ ನಾನಾ ರೀತಿಯ ಪಾತ್ರಗಳನ್ನು ಮಾಡಿದವರು. ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಆಮಿರ್ ಖಾನ್ (Aamir Khan) ನಟನೆಯ ಲಾಲ್ ಸಿಂಗ್ ಚಡ್ಡಾ (Lal Singh Chadha) ಇವರ ನಟನೆಯ ಕೊನೆಯ ಸಿನಿಮಾ. ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ಇವರು ವಿಶೇಷ ಪಾತ್ರವನ್ನು ನಿರ್ವಹಿಸಿದ್ದರು. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

ಬಾಲಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬಾಲಿವುಡ್ (Bollywood) ಕಂಬನಿ ಮಿಡಿದಿದೆ. ಆಮಿರ್ ಖಾನ್ ಸೇರಿದಂತೆ ಬಾಲಿವುಡ್ ನ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಬಾಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *