ಹುಟ್ಟುಹಬ್ಬ ಆಚರಿಸಿ, ಅಂಬರೀಶ್ ಗೆ ಬೇಡಿಕೆಯಿಟ್ಟ ಮಂಡ್ಯ ಅಭಿಮಾನಿಗಳು

ಮಂಡ್ಯ: ಮಂಡ್ಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿರುವ ಅಭಿಮಾನಿಗಳು ಅಂಬರೀಶ್ ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮಂಡ್ಯದ ಗಾಂಧಿ ಪಾರ್ಕ್ ನಲ್ಲಿ, ಅಂಬರೀಶ್ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಅಂಬಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಅಭಿಮಾನಿಗಳು ಅಂಬಿ ಕಟೌಟ್‍ಗೆ ಅರಿಶಿಣ, ಕುಂಕುಮ, ಹಾಲಿನ ಅಭಿಷೇಕ ಮಾಡಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದ ನಡುವೆಯೇ ಅಂಬಿ ರಾಜಕೀಯ ನಿವೃತ್ತಿ ಬಗ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಅಂಬಿ ನಡೆಯಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಎಲ್ಲ ಸ್ಥಾನಗಳನ್ನು ಸೋತಿದೆ.

ಅಂಬಿ ರಾಜಕೀಯಕ್ಕೆ ವಾಪಸ್ಸಾದರೆ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತೆ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ. ಆದರೆ ಅಭಿಮಾನಿಗಳ ಒತ್ತಡಕ್ಕೆ ಮಣಿದು ಅಂಬರೀಶ್ ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಾರ ಅನ್ನೋದನ್ನು ಕಾದು ನೋಡಬೇಕಿದೆ.

Comments

Leave a Reply

Your email address will not be published. Required fields are marked *