ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ರೈತನಿಗೆ ಅವಮಾನ – ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

ಬೆಂಗಳೂರು: ನಮ್ಮ ಮೆಟ್ರೋ (Namma Metro) ಬಳಿಕ ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ (Private Mall) ರೈತನಿಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ರೈತರೊಬ್ಬರು (Farmer) ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದೇ ಅವಮಾನ ಮಾಡಿರುವ ಘಟನೆ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ನಲ್ಲಿ (GT Mall) ನಡೆದಿದೆ. ಮಾಲ್ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಟ್ಟೆ ಕ್ಲೀನ್ ಇಲ್ಲವೆಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ ವಜಾ: MD

ಏನಿದು ಘಟನೆ?
ಹಾವೇರಿ ಮೂಲದ ನಾಗರಾಜ್‌ ಎಂಬುವವರು ತಮ್ಮ ತಂದೆ – ತಾಯಿಯನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ತಂದೆ-ತಾಯಿಗೆ ಸಿನಿಮಾ ತೋರಿಸಲು ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಆದ್ರೆ ತಮ್ಮ ತಂದೆ ಪಂಚೆ ಧರಿಸಿದ್ದಾರೆ ಅನ್ನೋ ಕಾರಣಕ್ಕೆ ಮಾಲ್‌ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಪಂಚೆ ಧರಿಸಿದರಿಗೆ ಮಾಲ್‌ ಒಳಗೆ ಬಿಡುವುದಿಲ್ಲ, ನಮ್ಮ ಮಾಲ್‌ನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಸಿಬ್ಬಂದಿ ಹೇಳಿರುವುದಾಗಿ ನಾಗರಾಜ್‌ ಆರೋಪಿಸಿದ್ದಾರೆ.

ನಾಗರಾಜ್‌ ಅವರ ತಂದೆ ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ರೈತರು. ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮಾಲ್‌ ಒಳಗೂ ಬಿಡದೇ, ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿ ಅವಮಾನ ಮಾಡಿದ್ದಾರೆ ಎಂದು ಪುತ್ರ ನಾಗರಾಜ್‌ ದೂರಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ – ಎನ್‌ಸಿಸಿ ಕೆಡೆಟ್‌ಗಳಿಗೆ ರಾಜ್ಯಪಾಲರ ಅಭಿನಂದನೆ

ರೈತನಿಗೆ ಮಾಲ್‌ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ ವರ್ತನೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಯಿತು. ಅಲ್ಲೇ ಇದ್ದ ಕೆಲ ಯೂಟ್ಯೂಬರ್ಸ್‌ ಘಟನೆಯನ್ನ ವೀಡಿಯೋ ಮಾಡಲು ಶುರು ಮಾಡಿದರು. ಬಳಿಕ ಮಾಲ್‌ನ ಆಡಳಿತ ಮಂಡಳಿ ಜೊತೆ ಮಾತನಾಡಿ, ರೈತನಿಗೆ ಮಾಲ್ ಒಳಗೆ ಪ್ರವೇಶ ಕೊಡಿಸುವಂತೆ ಮಾಡಿದ್ದಾರೆ. ಅರ್ಧ ಗಂಟೆ ಬಳಿಕ ಸಿಬ್ಬಂದಿ ರೈತನಿಗೆ ಮಾಲ್‌ಒಳಗೆ ಪ್ರವೇಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಪುತ್ರ ನಾಗರಾಜ್‌ ತಿಳಿಸಿದ್ದಾರೆ.

ಕಳೆದ ಫೆಬ್ರವರಿ 26ರಂದು ಬೆಂಗಳೂರಿನ ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈತನಿಗೆ ಅವಮಾನ ಮಾಡಿದ್ದ ಘಟನೆ ನಡೆದಿತ್ತು. ಇದಕ್ಕೆ ಮೆಟ್ರೋ ಆಡಳಿತ ಮಂಡಳಿ ಕ್ಷಮೆಯಾಚಿಸಿತ್ತು. ಇದನ್ನೂ ಓದಿ: ಹೆಣ್ಮಗಳೊಬ್ಬಳಿಂದ ನಮ್ಮ ವಿರುದ್ಧ ದೂರು ಬರೆಸಿದ ರಾಜ್ಯದ ಡಿಜಿಪಿ ನಾಲಾಯಕ್: ಸದನದಲ್ಲಿ ಹೆಚ್‌.ಡಿ.ರೇವಣ್ಣ ಭಾವೋದ್ವೇಗದ ಮಾತು