ಪಂಚರಾಜ್ಯ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬೆಂಬಲವಿಲ್ಲ: ಟಿಕಾಯತ್

ಲಕ್ನೋ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಯಾವುದೇ ರಾಜಕೀಯ ಪಕ್ಷಕ್ಕೂ ಬೆಂಬಲವನ್ನು ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ನಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದ ಅವರು ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು. ರೈತರು ಮತ್ತು ಸಂಘಟನೆಗೆ ಸಂಬಂಧಿಸಿದ ವಿಷಯಗಳಿಗೆ ಹೆಚ್ಚಿನ ಮಹತ್ವ ನೀಡುತ್ತೇವೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕದಳ-ಸಮಾಜವಾದಿ ಪಕ್ಷದ ಮೈತ್ರಿಗೆ ಬೆಂಬಲ ನೀಡುವಂತೆ ಬಿಕೆಯು ಅಧ್ಯಕ್ಷ ನರೇಶ್ ಟಿಕಾಯತ್ ಮನವಿ ಮಾಡಿದ ನಂತರ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ನಂತರ ಸಿಸೌಲಿಯಲ್ಲಿ ಬಿಜೆಪಿ ಮುಖಂಡ ಸಂಜೀವ್ ಬಲ್ಯಾನ್ ಜೊತೆ ಕೆಲಕಾಲ ಸಭೆ ನಡೆಸಿದರು.

ಸಭೆಯಲ್ಲಿ ಲಖಿಂಪುರ ಖೇರಿ ಘಟನೆಯಲ್ಲಿ ನಮ್ಮ ಹಲವಾರು ಜನರನ್ನು ಜೈಲಿಗೆ ಕಳುಹಿಸಿದ್ದರು. ಆದರೆ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಶೀಘ್ರವೇ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದರು.

ಜೊತೆಗೆ ರೈತರ ತೊಂದರೆ ಹಾಗೂ ಧಾನ್ಯಗಳ ಸಂಗ್ರಹಣೆಯಲ್ಲಿ ಸಮಸ್ಯೆಗಳಿವೆ. ಈ ವಿಷಯಗಳ ಕುರಿತು ಬಿಜೆಪಿ ಮುಖಂಡರ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ 13 ತಿಂಗಳ ಆಂದೋಲನದ ಮಾಡಿದ್ದೆವು. ಇದರಲ್ಲಿ ಅತ್ಯುತ್ತಮ ಗೆಲುವು ಸಾಧಿಸಿದ್ದೆವು. ರಾಜಕೀಯ ಪಕ್ಷಗಳು ರೈತರ ಬಗ್ಗೆ ಏನೆ ನಿರ್ಧಾರವನ್ನು ತೆಗೆದುಕೊಳ್ಳುವುದಾದರೂ ಈಗ ಅವುಗಳ ಬಗ್ಗೆ ಯೋಚಿಸಿ ಎಂದು ಹೇಳಿದರು. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

Comments

Leave a Reply

Your email address will not be published. Required fields are marked *