ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ – ಅಹೋರಾತ್ರಿ ಧರಣಿ

ರಾಮನಗರ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಫ್ (Bidadi Township) ಭೂಸ್ವಾಧೀನ ವಿರೋಧಿಸಿ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು (Farmers) ಆಹೋರಾತ್ರಿ ಧರಣಿ ಕೈಗೊಂಡಿದ್ದು, ಭೈರಮಂಗಲ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಭೂ ಸ್ವಾಧೀನ ಪ್ರಕ್ರಿಯೆಗೆ ಜೆಎಂಸಿ ಸರ್ವೆ ಆರಂಭವಾಗಿರುವ ಹಿನ್ನೆಲೆ ಸರ್ವೇ ಕಾರ್ಯಕ್ಕೆ ತಡೆ ನೀಡಿ ಧರಣಿ ನಡೆಸಲಾಗುತ್ತಿದೆ. ಬಿಡದಿ ಟೌನ್‌ಶಿಪ್‌ಗೆ 9 ಸಾವಿರ ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿರುವ ಜಿಬಿಎ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ. ಈ ಯೋಜನೆಯಿಂದ ರೈತರಿಗೆ ಯಾವುದೇ ಲಾಭ ಇಲ್ಲ, ಕೃಷಿ ಕೆಲಸ ಬಿಟ್ಟು ವಾಚ್‌ಮೆನ್ ಕೆಲಸ ಮಾಡಿಸಲು ಸರ್ಕಾರ ಮುಂದಾಗುತ್ತಿದೆ ಎಂದು ರೈತರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರೋಪಿ ನಟ ದರ್ಶನ್‌ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ

ನಾವು ಯಾವುದೇ ಕಾರಣಕ್ಕೂ ಯೋಜನೆಗೆ ಜಮೀನು ನೀಡುವುದಿಲ್ಲ. ಅಲ್ಲದೇ ಬಲವಂತವಾಗಿ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಮಿ ಕಿತ್ತುಕೊಂಡರೇ ರಕ್ತಪಾತ ನಡೆಯುತ್ತೆ ಎಂದು ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ