ಭಾನುವಾರ ನಡೆಯಲಿರುವ ಕೆಪಿಎಸ್‍ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಭಾನುವಾರ ನಡೆಯಲಿರುವ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆಯ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ.

ಈಗಾಗಲೇ ಕೆಪಿಎಸ್‍ಸಿ ತನ್ನ ಅಧಿಕೃತ ವೆಬ್‍ಸೈಟ್ ನಲ್ಲಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂಬ ಸತ್ತೋಲೆಯನ್ನು ಹೊರಡಿಸಲಾಗಿದೆ. ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತು ಮಧ್ಯಾಹ್ನ 2ಕ್ಕೆ ನಿಗದಿಯಾಗಿದ್ದ ಎಫ್‍ಡಿಸಿ ಪರೀಕ್ಷೆಗಳ ದಿನಾಂಕ ಬದಲಾಗಿದೆ.

ಕೆಪಿಎಸ್‍ಸಿ ಪರೀಕ್ಷೆಗಳನ್ನು ಮುಂದೂಡಿದೆ ಎಂಬ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಕೆಪಿಎಸ್‍ಸಿ ಪತ್ರಿಕಾ ಹೇಳಿಕೆಯನ್ನು ನೀಡಿದೆ. ಫೆಬ್ರವರಿ 4ರಂದು ಬಿಜೆಪಿ ಪರಿವರ್ತನಾ ಸಮಾವೇಶದ ಸಮಾರೋಪ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಮೋದಿ ಆಗಮನ ಹಿನ್ನೆಲೆಯಲ್ಲಿ ಮಹದಾಯಿಗಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಗಳೂರು ಬಂದ್‍ಗೆ ಕರೆ ನೀಡಿದ್ದಾರೆ.

ಒಂದು ವೇಳೆ ಫೆಬ್ರವರಿ 4ರಂದು ಬೆಂಗಳೂರು ಬಂದ್ ನಡೆದರೆ ಪರೀಕ್ಷಾರ್ಥಿಗಳಿಗೆ ತೊಂದರೆ ಆಗುವುದರಿಂದ ಮುನ್ನೇಚ್ಚರಿಕೆಯ ಕ್ರಮವಾಗಿ ಕೆಪಿಎಸ್‍ಸಿ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಿದೆ.

Comments

Leave a Reply

Your email address will not be published. Required fields are marked *