ಕೋಲಾರ: ಜಿಲ್ಲೆಯ ಮಾಲೂರು ಪಟ್ಟಣದ ಕನಕದಾಸರ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಿಳಾ ಮಣಿಗಳು ಮಾಜಿ ಸಿಎಂ ಸಿದ್ದರಾಮಯ್ಯರವರ ಕಾಲಿಗೆರಗಿದರು.
ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆಂದು ಕೋಲಾರಕ್ಕೆ ತೆರಳಿದ್ದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಅವರು ವೇದಿಕೆಯಲ್ಲಿಯೇ ಮಹಿಳಾ ಮಣಿಗಳೊಂದಿಗೆ ಪೋಸ್ ಕೊಟ್ಟು ಫೋಟೋ ಕ್ಲಿಕ್ಕಿಸಿಕೊಂಡರು. ಸಿದ್ದರಾಮಯ್ಯ ಜೊತೆಗೆ ಪೋಸ್ ಕೊಟ್ಟ ಬಳಿಕ ಮಹಿಳಾ ಮಣಿಗಳು ಕಾಲಿಗೆರಗಿ ಆಶೀರ್ವಾದ ಪಡೆದರು.

ಮತ್ತೊಂದೆಡೆ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳ ಸರಮಾಲೆಯೇ ಸುತ್ತಲೂ ಆವರಿಸಿದ್ದು, ಸನ್ಮಾನ ಮಾಡಿ ಫೋಟೋಗೆ ಪೋಸ್ ಕೊಡಲು ಅಭಿಮಾನಿಗಳು ಮುಗಿಬಿದ್ದರು. ಇದರಿಂದಾಗಿ ವೇದಿಕೆಯಲ್ಲಿರುವ ನಾಯಕರಿಗೆ ಕಿರಿಕಿರಿ ಉಂಟಾಗಿದ್ದು, ಆಯೋಜಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply