ಸಂವಿಧಾನ ಬದಲಾವಣೆ ಮಾತು ಆಡಿರೋ ಡಿಕೆಶಿ ರಾಜೀನಾಮೆ ಕೊಡೋವರೆಗೂ ಹೋರಾಟ – ಅನ್ನದಾನಿ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಕೊಡಲು ಸಂವಿಧಾನ ಬದಲಾವಣೆ ಮಾಡ್ತೀವಿ ಎಂಬ ಡಿಕೆಶಿ (DK Shivakumar) ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದು, ಡಿಕೆಶಿ ರಾಜೀನಾಮೆ ಕೊಡುವವರೆಗೂ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ (JDS) ಎಸ್‌ಸಿ (SC) ಘಟಕದ ಅಧ್ಯಕ್ಷ ಮಾಜಿ ಶಾಸಕ ಅನ್ನದಾನಿ (Annadani) ಕಿಡಿಕಾರಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ (Freedom Park) ಪ್ರತಿಭಟನೆ ನಡೆಸಿದ್ದು, ಡಿಕೆಶಿ ಪೋಸ್ಟರ್ ಹಿಡಿದು, ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ವಿಧಾನಸೌಧ ಮುತ್ತಿಗೆ ಹಾಕಲು ಹೊರಟ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ಇದನ್ನೂ ಓದಿ: ಉದ್ಯಮಿ ಮಗಳೊಂದಿಗೆ ಪ್ರಭಾಸ್‌ ಮದುವೆ ವಿಚಾರ ಸುಳ್ಳು- ಆಪ್ತರಿಂದ ಸ್ಪಷ್ಟನೆ

ಈ ವೇಳೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದ್ದಾರೆ. ಡಿಕೆಶಿ ಡಿಸಿಎಂ ಆಗಿದ್ದರೆ ಸಂವಿಧಾನದಿಂದ ಬೇರೆಯವರನ್ನ ಒಲೈಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ನೀವು ಯಾರಿಗಾದರೂ ಮೀಸಲಾತಿ ಕೊಡಿ ನಮ್ಮ ಅಭ್ಯಂತರ ಇಲ್ಲ. ಆದರೆ ಸಂವಿಧಾನ ಬದಲಾವಣೆ ಮಾಡುವ ಮಾತು ಆಡಬೇಡಿ. ನಾನು ಮಾತಾಡಿಲ್ಲ ಎಂದು ಹೇಳಿದ್ದೀರಾ. ನೀವು ಹೇಳಿದ್ದೀರಾ ಎಂದು ವಾಗ್ದಾಳಿ ನಡೆಸಿದರು.

ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್. ಅಂಬೇಡ್ಕರ್ ಸಂವಿಧಾನ ತಿದ್ದುಪಡಿ ಮಾಡಿದ್ದು ಈ ನೀಚ ಕಾಂಗ್ರೆಸ್. ಈ ದೇಶದಲ್ಲಿ ಸಂವಿಧಾನವನ್ನು ಅಪಮಾನ ಮಾಡಿರುವುದು ಕಾಂಗ್ರೆಸ್. ದೇವೇಗೌಡರನ್ನ, ಅಡ್ವಾಣಿ, ಜೆಪಿ ಅವರನ್ನ ಜೈಲಿಗೆ ಹಾಕಿದ್ದೀರಿ. ಅಂಬೇಡ್ಕರ್ ಸಂವಿಧಾನ ಅಮಾನತು ಮಾಡಿ, ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದರು. ಇದನ್ನ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದರು.

ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ಇದನ್ನ ಕೇಳಿದರೆ ಭಂಡ ಮಾತು ಆಡುತ್ತೀರಿ. ಕಾಂಗ್ರೆಸ್‌ನವರು ಮಾನ ಮರ್ಯಾದೆ ಇಟ್ಟುಕೊಂಡು ಮಾತಾಡಬೇಕು. ಡಿಕೆಶಿ ಮನಸಿನಲ್ಲಿ ಇರೋದು ಬಾಯಲ್ಲಿ ಬಂದಿದೆ. ಅವರಿಗೆ ನಾಚಿಕೆ ಆಗಬೇಕು. ಕೂಡಲೇ ಹೇಳಿಕೆ ವಾಪಸ್ ತೆಗೆದುಕೊಂಡು ಕ್ಷಮೆ ಕೇಳಬೇಕು. ಡಿಕೆಶಿ ಅವರೇ ನಿಮ್ಮಿಂದ ಸಂವಿಧಾನ ಬದಲಾವಣೆ ಸಾಧ್ಯವಿಲ್ಲ. ದಲಿತರ ಹಣವನ್ನ ನುಂಗಿರುವುದು ಕಾಂಗ್ರೆಸ್. ಸಂವಿಧಾನ ಬದಲಾವಣೆ ಮಾಡ್ತೀನಿ ಎಂದಿರುವ ಡಿಕೆಶಿ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ:Earthquake | ಮ್ಯಾನ್ಮಾರ್‌ನಲ್ಲಿ ಎರಡೆರಡು ಬಾರಿ ಪ್ರಬಲ ಭೂಕಂಪ – ಬ್ಯಾಂಕಾಕ್‌ನಲ್ಲೂ ನಡುಕ