ಒಟಿಟಿಗೆ ಬಂದ ಫೈಟರ್: ಹೃತಿಕ್-ದೀಪಿಕಾ ಕಾಂಬಿನೇಷನ್ ಚಿತ್ರ

ಬಾಲಿವುಡ್ ನ ಮತ್ತೊಂದು ಸೂಪರ್ ಹಿಟ್ ಸಿನಿಮಾ ಒಟಿಟಿಗೆ ಬಂದಿದೆ. ಹೃತಿಕ್ ರೋಷನ್ (Hrithik Roshan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಫೈಟರ್ ಸಿನಿಮಾ ಇಂದಿನಿಂದ ನೀವು ಒಟಿಟಿಯಲ್ಲಿ (OTT) ನೋಡಬಹುದು. ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದ್ದ ಈ ಚಿತ್ರವು ಹಲವು ವಿವಾದಕ್ಕೂ ಕಾರಣವಾಗಿತ್ತು.

ಫೈಟರ್ (Fighter) ಸಿನಿಮಾದ ಚುಂಬನ ದೃಶ್ಯ ಕುರಿತಂತೆ ವಾಯುಸೇನಾ ಅಧಿಕಾರಿಯೊಬ್ಬರು ಗರಂ ಆಗಿದ್ದಾರೆ. ವಾಯುಸೇನೆ ಸಮವಸ್ತ್ರ ಧರಿಸಿಕೊಂಡು ಹೃತಿಕ್ ಮತ್ತು ದೀಪಿಕಾ ಚುಂಬಿಸುವ ದೃಶ್ಯವು ವಸ್ತ್ರ ಸಂಹಿತೆ ನೀತಿಯನ್ನು ಉಲ್ಲಂಘಿಸಿದೆ. ಇದರಿಂದಾಗಿ ವಾಯುಸೇನೆಗೆ ಮುಜುಗರ ತರಿಸಿದೆ ಎಂದು ಅಧಿಕಾರಿ ಅಸ್ಸಾಮಿನ ಸೌಮ್ಯ ದೀಪ್ ದಾಸ್ (Soumya Deep Das) ಎನ್ನುವವರು ದೂರು (Complain) ದಾಖಲಿಸಿದ್ದಾರೆ.

ಫೈಟರ್ ಸಿನಿಮಾ ಕುರಿತಂತೆ ಬಿಡುಗಡೆ ದಿನದಿಂದ ಈವರೆಗೂ ಒಂದಿಲ್ಲೊಂದು ಸಂಕಷ್ಟವನ್ನು ಎದುರಿಸುತ್ತಲೇ ಬಂದಿದೆ.  ಈ ಹಿಂದೆ ಸೆನ್ಸಾರ್ ಮಂಡಳಿಯು ಚಿತ್ರದ ಎರಡು ದೃಶ್ಯಗಳನ್ನು ಕತ್ತರಿಸುವಂತೆ ಸೂಚಿಸಲಾಗಿತ್ತು. ಅದರಲ್ಲೂ ದೀಪಿಕಾ ಪಡುಕೋಣೆ ಬಿಕಿನಿ (Bikini) ಹಾಕಿದ ದೃಶ್ಯಕ್ಕೆ ಕತ್ತರಿ ಹಾಕಲಾಗಿತ್ತು.

 

ಈ ಹಿಂದೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು. ನಂತರ ಸಿನಿಮಾದಿಂದಲೇ ಆ ದೃಶ್ಯವನ್ನು ಕೈ ಬಿಡಲಾಗಿತ್ತು. ಫೈಟರ್ ಸಿನಿಮಾದಲ್ಲೂ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಳ್ಳಲಿಲ್ಲ. ಇದು ಅಭಿಮಾನಿಗಳ ನಿರಾಸೆ ಕಾರಣವಾಗಿತ್ತು.