ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್

ಕೊಪ್ಪಳ: ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಸಂಸದರು ಹಾಗೂ ಸಂಸದರ ಪುತ್ರ ಪೊಲೀಸರ ವಿರುದ್ಧ ಗಲಾಟೆ ಮಾಡಿಕೊಂಡಿದ್ದರು. ಈ ಘಟನೆ ಸಂಬಂಧ ನಗರ ಠಾಣೆಯ ಸಿಪಿಐ ರವಿ ಉಕ್ಕುಂದ ದೂರು ನೀಡಿದ್ದರು.

ರವಿ ಉಕ್ಕುಂದ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೊಪ್ಪಳ ನಗರ ಠಾಣೆಯಲ್ಲಿ ಸಂಸದ ಸಂಗಣ್ಣ ಕರಡಿ, ಪುತ್ರ ಅಮರೇಶ್ ಕರಡಿ ಸೇರಿದಂತೆ 38 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

 

ಸೋಮವಾರ ಬೆಳಗ್ಗೆ ಒತ್ತಾಯಪೂರ್ವಕವಾಗಿ ಬಿಜೆಪಿಯವರು ಅಂಗಡಿಗಳನ್ನು ಬಂದ್ ಮಾಡಿಸಿದ್ದರು. ಈ ವೇಳೆಯಲ್ಲಿ ಪರವಾನಿಗೆ ಇಲ್ಲದ ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅನುಮತಿ ಪಡೆಯದ ಹಿನ್ನೆಲೆ ವಶಪಡಿಸಿಕೊಳ್ಳಲಾಗಿತ್ತು. ಇದರಿಂದ ಆಕ್ರೋಶಗೊಂಡ ಸಂಸದ ಸಂಗಣ್ಣ ಕರಡಿ ಮತ್ತು ಪುತ್ರ ಅಮರೇಶ್, ಪೊಲಿಸರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಠಾಣೆಯಲ್ಲಿ ಕರ್ತವ್ಯ ನಿರತ ಡಿವೈಎಸ್‍ಪಿ ಎಸ್ ಎಮ್ ಸಂದಿಗವಾಡ್ ಅವರನ್ನು ಸಂಗಣ್ಣ ಕರಡಿ ಎಳೆದಾಡಿದ್ದಾರೆ. ಇತ್ತ ತಂದೆ ಜೊತೆಯಲ್ಲಿದ್ದ ಪುತ್ರ ಸಹ ಅಧಿಕಾರಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು.

Comments

Leave a Reply

Your email address will not be published. Required fields are marked *