ವಾಟಾಳ್ ನಾಗರಾಜ್ ವಿರುದ್ಧ ಎಫ್‍ಐಆರ್

ಬೆಂಗಳೂರು: ಎಂಇಎಸ್ ನಿಷೇಧ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಮಾರ್ಚ್ 18ರಂದು ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸ್ಥಳ ನಿಗದಿಯಾಗಿದೆ. ಆದರೂ ಸಹ ಆದೇಶ ಉಲ್ಲಂಘಿಸಿ ಬೇರೆಡೆ ಪ್ರತಿಭಟನೆ ನಡೆಸಿದ್ದರು.

ಈ ಮೂಲಕವಾಗಿ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಎಚ್ಚೆತ್ತುಕೊಳ್ಳದಿದ್ದರೆ ನಮಗೂ ಕಾಶ್ಮೀರಿ ಪಂಡಿತರದ್ದೇ ಪರಿಸ್ಥಿತಿ ಬರಬಹುದು – ಪೇಜಾವರ ಶ್ರೀ ಎಚ್ಚರಿಕೆ

Comments

Leave a Reply

Your email address will not be published. Required fields are marked *