ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

ಬೆಂಗಳೂರು: ಕಸ ಹಾಕುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಯಾಂಡಲ್‍ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ರೇಖಾ ಜಗದೀಶ್ ಹಾಗೂ ಪುತ್ರ ಸ್ನೇಹಿತ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಸೌಂದರ್ಯ ಜಗದೀಶ್ ಮತ್ತು ಮಾಜಿ ಮೇಯರ್ ಪುತ್ರಿ ಮಂಜುಳಾ ಪುರುಷೋತ್ತಮ ನಡುವೆ ಗಲಾಟೆ ನಡೆದಿದ್ದು, ಮಂಜುಳಾ ಪುರುಷೋತ್ತಮ್ ಅವರ ಮನೆ ಕೆಲಸದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಸೌಂದರ್ಯ ಜಗದೀಶ್ ಕುಟುಂಬಸ್ಥರು, ಬೌನ್ಸರ್ ಸೇರಿ ಹಲ್ಲೆ ಮಾಡಿರುವುದಾಗಿ ಮಂಜುಳಾ ಪುರುಷೋತ್ತಮ್ ತಿಳಿಸಿದ್ದಾರೆ. ಇಷ್ಟೇ ಅಲ್ಲದೇ ಸೌಂದರ್ಯ ಜಗದೀಶ್ ಮತ್ತು ಮಂಜುಳಾ ಪುರುಷೋತ್ತಮ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಕಸ ಗಲಾಟೆ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ನಾಳೆಯಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಸ್ಕೂಲ್ ಓಪನ್ – ಶಾಲೆಗಳಲ್ಲಿ ಸಕಲ ಸಿದ್ಧತೆ

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರೇಖಾ ಜಗದೀಶ್, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಗಲಾಟೆ ಎಂದಿದ್ದಾರೆ. ನಾವು ಬೆಳೆಯುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಈ ರೀತಿ ಮಾಡಿದ್ದಾರೆ. ನನ್ನ ಮಕ್ಕಳು ದೇವರಿದ್ದಂತೆ ಎಂದು ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ಕೂತು ಮಾತಾಡೋಣ ಎಂದಿದ್ದೆ. ಆದರೆ ಬೇಕು ಅಂತಲೇ ಹೀಗೆಲ್ಲ ಮಾಡಿದ್ದಾರೆ ಎಂದು ಮಂಜುಳಾ ಪುರುಷೋತ್ತಮ್ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

ಸೌಂದರ್ಯ ಜಗದೀಶ್ ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ಮಾಪಕರಾಗಿದ್ದು, ಇವರ ಪುತ್ರ ಸ್ನೇಹಿತ್ ಅಭಿನಯಿಸಿದ್ದ ಅಪ್ಪು, ಪಪ್ಪು ಹಾಗೂ ಸ್ನೇಹಿತರು ಸಿನಿಮಾ ಸಖತ್ ಫೇಮಸ್ ಆಗಿತ್ತು.

Comments

Leave a Reply

Your email address will not be published. Required fields are marked *