ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್

ಬೆಂಗಳೂರು: ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ (Muthappa Rai) ಪುತ್ರ ರಿಕ್ಕಿ ರೈ (Ricky Rai) ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್‌ ರಸ್ತೆ ಬಳಿಯ ಹೋಟೆಲ್‌ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ತನ್ನ ಪತ್ನಿ ಜೊತೆ ಹೆಚ್ಚಾಗಿ ಫೋನ್‌ನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ

ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು. ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರೆಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ಪ್ರಕರಣ ದಾಖಲಾಗಿತ್ತು.

ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್‌ ದೂರು ದಾಖಲಿಸಿದ್ದರು. ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ರಿಕ್ಕಿ ರೈ ಮೇಲೆ ಹಲ್ಲೆ ಮಾಡಿದ್ದಾಗಿ ಶ್ರೀನಿವಾಸ್ ನಾಯ್ಡು ವಿರುದ್ಧ ದೂರು ಕೊಡಲಾಗಿತ್ತು. ಇದೀಗ ಕೋರ್ಟ್ ಪಿಸಿಆರ್ ಅನ್ವಯ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕ ಸಾವು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]