ವಾಯುಸೇನೆ ಕಚೇರಿ ಇರೋ ದೆಹಲಿಯ ಸಿಜಿಒ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ

ನವದೆಹಲಿ: ವಾಯುಸೇನೆ ಕಚೇರಿ ಇರುವ ಸದೆಹಲಿಯ ಸಿಜಿಒ ಕಾಂಪ್ಲೆಕ್ಸ್‌ನ ಪಂಡಿತ್ ದೀನದಯಾಳ್ ಅಂತ್ಯೋದಯ ಭವನದ ಐದನೇ ಅಂತಸ್ತಿನಲ್ಲಿ ಇಂದು ಬೆಳಗ್ಗೆ ಸುಮಾರು 8.30ಕ್ಕೆ ಅಗ್ನಿ ಅವಘಡ ಸಂಭವಿಸಿದೆ.

ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಸ್ಥಳೀಯರು ಬೆಳಗ್ಗೆ ಸುಮಾರು 8.34ಕ್ಕೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸುಮಾರು 24 ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್‌ನ ಅಧಿಕಾರಿಯೊಬ್ಬರು ಅಗ್ನಿ ಅವಘಡದಲ್ಲಿ ಸಿಲುಕಿ ಪ್ರಜ್ಞೆ ಕಳೆದುಕೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೇಂದ್ರದ ಮಹತ್ವ ಇಲಾಖೆಗಳು ಇಲ್ಲಿ ಕೆಲಸ ಮಾಡುತ್ತಿವೆ. ಪರಿಸರ ಸಚಿವಾಲಯ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯಗಳು ಇದೇ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡವನ್ನು ಮೊದಲು ಪರ್ಯಾವರಣ್ ಭವನ್ ಎಂದು ಕರೆಯುತ್ತಿದ್ದರು. ಶಾರ್ಟ್ ಸರ್ಕ್ಯೂಟ್‍ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *