ಕಮಲಾ ನೆಹರು ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ನಾಲ್ವರು ಮಕ್ಕಳ ದಾರುಣ ಸಾವು

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‍ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‍ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.

3ನೇ ಮಹಡಿಯಲ್ಲಿರುವ ಮಕ್ಕಳ ಐಸಿಯು ವಾರ್ಡ್‍ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 40 ಮಕ್ಕಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ಇದೀಗ 36 ಮಕ್ಕಳನ್ನು ಬೇರೆ ವಾರ್ಡ್‍ಗೆ ಸ್ಥಳಾಂತರಿಸಲಾಗಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಬೆಂಕಿಗೆ ಅಹುತಿಯಾಗಿದ್ದಾರೆ. ಇದನ್ನೂ ಓದಿ: ಅಂತ್ಯವಾಯಿತು ಟೀಂ ಇಂಡಿಯಾದಲ್ಲಿ ಕೊಹ್ಲಿ, ಶಾಸ್ತ್ರಿ ಯುಗ

ಈ ಘಟನೆ ಕುರಿತಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಭೋಪಾಲ್‍ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‍ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ದುಃಖಕರ ಸಂಗತಿಯಾಗಿದೆ. ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ನಡೆಯುತ್ತಿದೆ. ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತನಿಖೆಯನ್ನು ಎಸಿಎಸ್ ಸಾರ್ವಜನಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಮೊಹಮ್ಮದ್ ಸುಲೇಮಾನ್ ಅವರು ಮಾಡುತ್ತಾರೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಆದರೆ ಈಗಾಗಲೇ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೆಲವು ಮಕ್ಕಳನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

‘ಮಕ್ಕಳ ಅಕಾಲಿಕ ಸಾವು ಅಸಹನೀಯ ನೋವನ್ನುಂಟು ಮಾಡಿದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ಮಕ್ಕಳ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಐಪಿಎಲ್‍ನ ನೂತನ ತಂಡ ಅಹಮದಾಬಾದ್‍ನ ಕೋಚ್ ಆಗಲಿದ್ದಾರೆ ರವಿಶಾಸ್ತ್ರಿ?

ಮತ್ತೊಂದೆಡೆ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ವಾರ್ಡ್‍ನಲ್ಲಿ 40 ಮಕ್ಕಳಿದ್ದರು. ಅವರಲ್ಲಿ 36 ಮಕ್ಕಳು ಸುರಕ್ಷಿತವಾಗಿದ್ದಾರೆ. ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಮೃತರ ಪೋಷಕರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Comments

Leave a Reply

Your email address will not be published. Required fields are marked *