ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.
ರಾತ್ರಿ ರೈಲ್ವೇ ನಿಲ್ದಾಣದ ಫುಡ್ ಪ್ಲಾಜಾ ಸಮೀಪದಲ್ಲಿರುವ ಕಂಬದ ವಿದ್ಯುತ್ ಸ್ವಿಚ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ತಕ್ಷಣವೇ ಬೆಂಕಿ ಕಾಣಿಸಿಕೊಂಡು ಕಂಬವು ಹೊತ್ತಿ ಉರಿದಿದೆ. ಘಟನಾ ಸ್ಥಳದಲ್ಲಿಯೇ ಇದ್ದ ಪೊಲೀಸರು ಅಗ್ನಿ ನಿರೋಧಕ ಅನಿಲ ಬಳಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply