ಮಂಡ್ಯ: ಆಕಸ್ಮಿಕ ಬೆಂಕಿ ತಗುಲಿ ಕೆನರಾ ಬ್ಯಾಂಕ್ ಕಟ್ಟಡ ಬೆಂಕಿಗೆ ಆಹುತಿಯಾಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಅರಣಿ ಗ್ರಾಮದಲ್ಲಿ ಜರುಗಿದೆ.
ಶನಿವಾರ ಮಧ್ಯ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಅರಣಿ ಶಾಖೆಯ ಕೆನರಾ ಬ್ಯಾಂಕ್ ಕಟ್ಟಡ ಬೆಂಕಿಯಿಂದ ಹೊತ್ತಿ ಉರಿದಿದೆ. ಕಟ್ಟಡಕ್ಕೆ ಬೆಂಕಿ ಬಿದ್ದ ಕಾರಣ ಬ್ಯಾಂಕ್‍ನಲ್ಲಿ ಇದ್ದ ಕಡತಗಳು ಹಾಗೂ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಅಲ್ಲದೇ ಹಣವೂ ಸುಟ್ಟು ಹೋಗಿದ್ಯಾ ಎಂದು ತಿಳಿದುಬಂದಿಲ್ಲ.

ಈ ಬೆಂಕಿ ಅವಘಡ ಶಾರ್ಟ್ ಸರ್ಕ್ಯೂಟ್‍ನಿಂದ ಆಗಿರಬಹುದು ಎನ್ನಲಾಗುತ್ತಿದ್ದು, ಯಾವ ಕಾರಣಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಿಖರವಾಗಿ ತಿಳಿದುಬಂದಿಲ್ಲ. ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಬರಲು ಸಾಧ್ಯವಾಗಿಲ್ಲ. ನಂತರ ಬೆಂಕಿ ಹೊತ್ತಿಕೊಂಡ ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಈ ವೇಳೆಗೆ ಬ್ಯಾಂಕ್ ಕಟ್ಟಡ ಶೇ, 75 ರಷ್ಟು ಹೊತ್ತಿ ಉರಿದಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply