ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ-ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದ ಘಟನೆ ನೆಲಮಂಗಲ ಸಮೀಪದ ಮಾದವಾರ ಬಳಿ ನಡೆದಿದೆ.

ನೆಲಮಂಗಲದಿಂದ ಶಿವಾಜಿನಗರಕ್ಕೆ ತೆರಳುತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಈ ಅವಘಡ ಸಂಭವಿಸಿದೆ. ಬಸ್‍ನ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನವಯುಗ ಟೋಲ್ ಸಿಬ್ಬಂದಿಗಳು ಬೆಂಕಿ ನಂದಿಸುವ ಮೂಲಕ ಕಾರ್ಯ ಯಶಸ್ವಿಯಾಯಿತು.

ಬೆಂಕಿ ಅವಘಡದ ಸಂದರ್ಭದಲ್ಲಿ ಬಸ್ಸಿನಲ್ಲಿ ಶಾಲಾ ಮಕ್ಕಳು, ವೃದ್ಧರು ಸೇರಿದಂತೆ 35 ಮಂದಿ ಪ್ರಯಾಣಿಕರಿದ್ದರು. ಈ ಅವಘಡದಿಂದಾಗಿ ಪ್ರಯಾಣಿಕರಿಗೆ ಯಾವುದೇ ಪ್ರಾಣಾಹಾನಿಯಾಗಿಲ್ಲ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Comments

Leave a Reply

Your email address will not be published. Required fields are marked *