ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ಬಟ್ಟೆ ಅಂಗಡಿಯೊಂದು ಧಗಧಗನೆ ಹೊತ್ತಿ ಉರಿದಿದ್ದು, ಸುಟ್ಟು ಹೋಗಿದೆ.
ರಮೇಶ್ ಎಂಬವರಿಗೆ ಸೇರಿದ ನಾಕೋಡ ಹೆಸರಿನ ಅಂಗಡಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಅವಘಡದಿಂದ ಸುಮಾರು 20 ಲಕ್ಷ ರೂ. ಮೌಲ್ಯದ ಬಟ್ಟೆ ಪಿಠೋಪಕರಣ ಬೆಂಕಿಗಾಹುತಿಯಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಅದನ್ನು ಗಮನಿಸಿದ ಜನರು ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಅಗ್ನಿಶಾಮಕ ದಳ ಕಾರ್ಯಚರಣೆ ಮಾಡಿ ಬೆಂಕಿಯನ್ನು ನಂದಿಸಿದ್ದಾರೆ. ಇಂದು ಮುಂಜಾನೆ ಸುಮಾರು 3 ಗಂಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ.
ಈ ಘಟನೆ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply