ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿಶೀಟರ್‌ಗಳಿದ್ದಾರೆ ಅಂತ ಮೊದಲು ಲೆಕ್ಕ ಹಾಕಲಿ: ಸಿಎಂ

ನವದೆಹಲಿ: ಕಾಂಗ್ರೆಸ್‌ನಲ್ಲಿ (Congress) ಎಷ್ಟು ಜನ ರೌಡಿಶೀಟರ್‌ಗಳಿದ್ದಾರೆ (Rowdy Sheeter) ಅಂತ ಮೊದಲು ಲೆಕ್ಕ ಹಾಕಲಿ, ಬಳಿಕ ಬಿಜೆಪಿ (BJP)ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ರೌಡಿಶೀಟರ್ ಸೈಲೆಂಟ್ ಸುನೀಲ (Silent Sunila) ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿದ್ದನ್ನು ಸಮರ್ಥಿಸಿಕೊಂಡರು. ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ (Karnataka-Maharashtra Border Dispute) ಹಿನ್ನೆಲೆ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಅವರು ಹಿರಿಯ ವಕೀಲ ಮುಕುಲ್ ರೊಹಟಗಿ ಅವರನ್ನು ಭೇಟಿ ಮಾಡಿ ವಾದ ಮಂಡಿಸುವ ಬಗ್ಗೆ ಚರ್ಚಿಸಿದರು.

ಭೇಟಿ ಬಳಿಕ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧ ಪಟ್ಟ ಹಾಗೆ ಈಗಾಗಲೇ ಎಲ್ಲವನ್ನು ಸಹ ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ನಮಗೆ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಸೈಲೆಂಟ್ ಸುನೀಲಗೆ ಬಿಜೆಪಿ ಬಾಗಿಲು ಬಂದ್- ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಮಹಾರಾಷ್ಟ್ರ ಸರ್ಕಾರ ಹಾಕಿರುವ ಅರ್ಜಿಯ ಸಿಂಧುತ್ವ ಕುರಿತಾಗಿ ವಿಚಾರಣೆ ನಡೆಯಲಿದೆ. ಹಿಂದಿನ ಸಿಜೆಐ ದೀಪಕ್ ಮಿಶ್ರಾ ಅವರು ಇದರ ಸಿಂಧುತ್ವದ ವಿಚಾರವನ್ನು ಸಿದ್ಧಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ. ನಮಗೆ ಭರವಸೆ ಇದೆ, ಕರ್ನಾಟಕ ಪರವಾಗಿ ಸಮರ್ಥವಾಗಿ ವಾದ ಮಾಡಲಿದ್ದೇವೆ. ಮಹಾರಾಷ್ಟ್ರದ ನಾಯಕರುಗಳು ನಾವು ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಅಷ್ಟೇ ಎಂದರು.

ರಾಜ್ಯದ ಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿ ವಿಚಾರ ಬಗ್ಗೆ ಮಾತನಾಡಿ, ಮಹಾರಾಷ್ಟ್ರ ಗೃಹ ಇಲಾಖೆ ಜೊತೆಗೆ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ. ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಜತ್ ತಾಲೂಕಿನ 42 ಗ್ರಾಮಸ್ಥರು ಹಿಂದಿನಿಂದ ಕರ್ನಾಟಕ ಸೇರಲು ಬಯಸಿದ್ದಾರೆ. ಸರಿಯಾದ ಸೌಲಭ್ಯ ದೊರಕದ ಹಿನ್ನೆಲೆ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಆದರೆ ಈ ಎಲ್ಲಾ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿದೆ. ನಾನು ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡುತ್ತೇನೆ. ಕಾನೂನು ಸಲಹೆ ಪಡೆದು ಮುಂದುವರಿಯುತ್ತೇನೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಧರ್ಮ ದಂಗಲ್ – ಹಿಂದೂ ಸಂಘಟನೆಯ 25ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *