ಮೊದಲ ಬಾರಿಗೆ ಮಗನನ್ನು ಭೇಟಿಯಾದ ಶಾರೂಖ್

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಅಧಿಕಾರಿಗಳಿಂದ ಅಕ್ಟೋಬರ್ 8 ರಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್‍ ಅವರನ್ನು ಬಾಲಿವುಡ್ ನಟ ಶಾರೂಖ್ ಖಾನ್ ಇಂದು ಮುಂಬೈನ ಆರ್ಥರ್ ರೋಡ್ ಜೈಲಿಗೆ ಆಗಮಿಸಿ ಭೇಟಿಯಾಗಿದ್ದಾರೆ.

ಅಕ್ಟೋಬರ್ 2 ರಂದು ಮುಂಬೈನಿಂದ ಗೋವಾಗೆ ಹೊರಟಿದ್ದ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಲಾಗಿತ್ತಿತ್ತು. ಈ ಪಾರ್ಟಿಯಲ್ಲಿ ಸ್ನೇಹಿತರ ಜೊತೆಗೆ ಭಾಗಿಯಾಗಿದ್ದ ಆರ್ಯನ್ ಖಾನ್ ಡ್ರಗ್ ಸೇವನೆ ಮಾಡಿದ್ದರು ಎಂದು ಆರೋಪಿಸಿ ಎನ್‍ಸಿಬಿ ಅಧಿಕಾರಿಗಳು ಬಂಧಿಸಿದ್ದರು, ಇದೀಗ ಮೊದಲ ಬಾರಿಗೆ ಆರ್ಯನ್ ಖಾನ್ ಅವರನ್ನು ಶಾರೂಖ್ ಖಾನ್ ಭೇಟಿಯಾಗಿದ್ದಾರೆ.

aryan

ಕೋವಿಡ್-19 ಮಧ್ಯೆ ಮಹಾರಾಷ್ಟ್ರ ಸರ್ಕಾರ ಜೈಲಿನಲ್ಲಿರುವವರನ್ನು ಭೇಟಿಯಾಗದೇ ಇರುವಂತೆ ನಿರ್ಬಂಧ ಹೇರಿತ್ತು. ಇದೀಗ ಈ ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕ ಶಾರೂಖ್ ಮಗನನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಕಳೆದರು. ಇದನ್ನೂ ಓದಿ: ಜೈಲೂಟ ತಿನ್ನಲು ಆರ್ಯನ್ ಪರದಾಟ – ಕ್ಯಾಂಟೀನ್ ಊಟಕ್ಕೆ ಮನಿ ಆರ್ಡರ್ ಕಳುಹಿಸಿದ ಶಾರೂಖ್

ಈವರೆಗೂ ಎರಡು ಬಾರಿ ಆರ್ಯನ್ ಖಾನ್‍ಗೆ ಜಾಮೀನನ್ನು ನಿರಾಕರಿಸಲಾಗಿದ್ದು, ಇದೀಗ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಲಾಗಿದೆ. ಅಲ್ಲದೇ ಇಂದಿಗೆ ಆರ್ಯನ್ ಖಾನ್ ನ್ಯಾಯಾಂಗ ಬಂಧನ ಅಂತ್ಯಗೊಳ್ಳಲಿದೆ. ಶುಕ್ರವಾರ ಆರ್ಯನ್ ಖಾನ್ ಶಾರೂಖ್ ಹಾಗೂ ಗೌರಿ ಖಾನ್ ಜೊತೆ ವೀಡಿಯೋ ಕಾಲ್ ಮೂಲಕ ಮಾತನಾಡಿದ್ದರು. ಇದನ್ನೂ ಓದಿ: ಆರ್ಯನ್‍ಗೆ ಜಾಮೀನು ಸಿಗುವವರೆಗೂ ಸಿಹಿ ಅಡುಗೆ ಮಾಡ್ಬೇಡಿ – ಸಿಬ್ಬಂದಿಗೆ ಗೌರಿ ಸೂಚನೆ

Comments

Leave a Reply

Your email address will not be published. Required fields are marked *