ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM

ಡೆಹ್ರಾಡೂನ್: ವರುಣನ ಆರ್ಭಟಕ್ಕೆ ಉತ್ತರಾಖಂಡ್ ನಲುಗಿ ಹೋಗಿದೆ. ಈ ಪ್ರವಾಹದಲ್ಲಿ ಸಾವನ್ನಪ್ಪಿದ ಕುಟುಂಬ ಹಾಗೂ ಮನೆಕಳೆದುಕೊಂಡವರಿಗೆ ಪರಿಹಾರ ನೀಡುವುದಾಗಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ.

2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡ್ ದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ. ಇದನ್ನೂ ಓದಿ:  ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

ಪ್ರವಾಹದಿಂದ ಮುಳುಗಡೆಯಾಗಿರುವ ಸ್ಥಳಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ್ ಸರ್ಕಾರ ಪರಿಹಾರ ನೀಡುವುದಾಗಿ ಹೇಳಿದೆ. ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್‍ನಲ್ಲಿ ಇಂದು ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಉತ್ತರಾಖಂಡ ರಾಜ್ಯದ ಉಳಿದ ಭಾಗಕ್ಕೂ ರಸ್ತೆಸಂಪರ್ಕ ಕಡಿತವಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮೂರು ಹೆಲಿಕಾಪ್ಟರ್ ಬಳಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

Comments

Leave a Reply

Your email address will not be published. Required fields are marked *