ಮಾಂಸಾಹಾರ ಸೇವನೆಯಿಂದ ಫುಡ್ ಪಾಯಿಸನ್ – 20 ಮಂದಿ ಅಸ್ವಸ್ಥ, 10 ಮಂದಿ ಆಸ್ಪತ್ರೆಗೆ ದಾಖಲು

ರಾಯಚೂರು: ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು (Lingasuguru) ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ.

ಬುಧವಾರ ಮಧ್ಯಾಹ್ನದ ಊಟದ ಬಳಿಕ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು ಹಿರಿಯರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು ಸುಮಾರು 10 ಜನರಿಗೆ ವಾಂತಿ ಭೇದಿಯಿಂದ ನಿರ್ಜಲೀಕರಣವಾಗಿದೆ. ತೀವ್ರ ಅಸ್ವಸ್ಥಗೊಂಡ 10 ಜನರನ್ನ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಫ್‌16 ಯುದ್ಧ ವಿಮಾನ ಹಾರಿಸಿದ್ದ ರತನ್‌ ಟಾಟಾ

ಸುಮಾರು 250 ಕುಟುಂಬಗಳು ವಾಸಿಸುವ ತಾಂಡದಲ್ಲಿ ಘಟನೆ ನಡೆದಿದೆ. ದೇವರ ಕಾರ್ಯಕ್ಕಾಗಿ ಮಾಡಿದ್ದ ಮಾಂಸಾಹಾರ ಸೇವಿಸಿದವರು ಮಾತ್ರ ಅನಾರೋಗ್ಯಕ್ಕೀಡಾಗಿದ್ದಾರೆ. ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಅಮರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹೋಗಿ ಬಾ ನನ್ನ ಗೆಳೆಯ – ರತನ್ ಟಾಟಾ ನಿಧನಕ್ಕೆ ಸ್ನೇಹಿತೆ ಸಿಮಿ ಭಾವುಕ ಪೋಸ್ಟ್​