ಬಾಗಲಕೋಟೆ: ಆಸ್ತಿ ವಿಚಾರಕ್ಕೆ ಮಗನೊಬ್ಬ ತನ್ನ ತಂದೆಯನ್ನೇ ಕೊಡಲಿಯಿಂದ ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ಮಲ್ಲಿಕಾರ್ಜುನ(65) ತನ್ನ ಮಗನಿಂದಲೇ ಕೊಲೆಗೀಡಾದ ವ್ಯಕ್ತಿ. ಶರಣಪ್ಪ ಕೊಲೆಗೈದ ಮಗ. ಬಾದಾಮಿಯ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ಗುರುವಾರ ಬೆಳಗ್ಗೆ ಶರಣಪ್ಪ ತಂದೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಆಸ್ತಿ ವಿಚಾರವಾಗಿ ಆಗಾಗ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆಯುತ್ತಲೇ ಇತ್ತು. ಇಂದು ಬೆಳಗ್ಗೆ ಜಗಳವಾದಾಗ ತಂದೆ ಮಗನಿಗೆ ಆಸ್ತಿ ನೀಡಲ್ಲ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಜೋರಾಗಿದೆ. ಕೊನೆಗೆ ಜಗಳ ತಾರಕ್ಕಕ್ಕೇರಿ ಕೋಪಗೊಂಡ ಶರಣಪ್ಪ ತಂದೆಯನ್ನೇ ಕೊಲೆ ಮಾಡಲು ನಿರ್ಧರಿಸಿದ್ದಾನೆ. ಬಳಿಕ ಏಕಾಏಕಿ ಸಿಲಿಂಡರ್ ಹಾಗೂ ಕೊಡಲಿಯಿಂದ ತಂದೆಯ ತಲೆಗೆ ಹೊಡೆದು ಅಮಾನವೀಯವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಮೇಲೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply