ಬೆಂಗಳೂರಿನ ಶಾಲೆಯಲ್ಲಿ 231 ಮಕ್ಕಳಿಗೆ 5 ವರ್ಷಗಳಿಂದ ಒಬ್ಬರೇ ಶಿಕ್ಷಕರು

BNG SCHOOL

ಬೆಂಗಳೂರು: ನಿನ್ನೆಯಷ್ಟೇ ಶಾಲೆ ಆರಂಭವಾಗಿದ್ದು, ಕೆಲ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದು ಗೊತ್ತಾಗಿದೆ. ಅದರಲ್ಲೂ ಬೆಂಗಳೂರಿನ ಸರ್ಕಾರಿ ಶಾಲೆಯೊಂದರಲ್ಲಿ 231 ಮಕ್ಕಳಿಗೆ ಕಳೆದ 5 ವರ್ಷಗಳಿಂದಲೂ ಒಬ್ಬರೇ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.

BNG SCHOOL

ಬೆಂಗಳೂರಿನ ಮಹದೇವಪುರ ಕ್ಷೇತ್ರದ ಹಾಲನಾಯಕನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ 231 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಕಳೆದ 5 ವರ್ಷಗಳಿಂದ ಒಬ್ಬರೇ ಶಿಕ್ಷಕರಿಂದ ಪಾಠ-ಪ್ರವಚನ ನಡೆಯುತ್ತಿದೆ. ಹಾಗಾಗಿ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಮತಾಂತರ ಕಾಯ್ದೆಗೆ ಕ್ರಿಶ್ಚಿಯನ್ ಸಮುದಾಯದವರು ಭಯ ಬೀಳೋದು ಯಾಕೆ: ಆರಗ ಜ್ಞಾನೇಂದ್ರ

BNG

ಕೆ.ಆರ್.ಪುರಂ ವ್ಯಾಪ್ತಿಗೆ ಬರುವ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹಲವು ಬಾರಿ ಅಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಶಿಕ್ಷಕರನ್ನು ನಿಯೋಜಿಸಿದ್ರೆ ಮಾತ್ರ ಶಾಲೆ ಪ್ರಾರಂಭಿಸಲು ಬಿಡ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *