ಮೊದಲ ಬಾರಿಗೆ ಒಂದಾದ ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ರಾಜಮೌಳಿ

ಫೆಬ್ರವರಿ ತಿಂಗಳು ಕೊನೆಯ ದಿನದಂದು ಬೆಳಂ ಬೆಳಗ್ಗೆ ಶಿವರಾಜ್ ಕುಮಾರ್ ಅಭಿಮಾನಿಗಳ ಸಿಹಿ ಸುದ್ದಿ ನೀಡಿದೆ ರಾಧೆ ಶ್ಯಾಮ್ ಸಿನಿಮಾ ತಂಡ. ಭಾರತೀಯ ಸಿನಿಮಾ ರಂಗದಲ್ಲಿ ಸಾಕಷ್ಟು ಕ್ರೇಜ್ ಕ್ರಿಯೇಟ್ ಮಾಡಿರುವ ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಕೂಡ ಧ್ವನಿ ರೂಪದಲ್ಲಿ ಇರಲಿದ್ದಾರಂತೆ. ಹೀಗಂತ ಅಧಿಕೃತವಾಗಿಯೇ ಚಿತ್ರತಂಡ ಹೇಳಿಕೊಂಡಿದೆ. ಅವರು ಯಾವ ರೂಪದಲ್ಲಿ ಇರಲಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದೆ. ಇದನ್ನೂ ಓದಿ : ಕ್ರೇಜಿಸ್ಟಾರ್ ವಿ.ರವಿಚಂದ್ರನ್ ತಾಯಿ ವಿಧಿವಶ

ಬಾಹುಬಲಿ ಖ್ಯಾತಿಯ ಪ್ರಭಾಸ್ ಮತ್ತು ಸ್ಟಾರ್ ನಟಿ ಪೂಜಾ ಹೆಗ್ಡೆ ಕಾಂಬಿನೇಷನ್ ನ ಈ ಸಿನಿಮಾ ಭಾರೀ ಕುತೂಹಲ ಮೂಡಿಸಿದೆ. ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲು ತಯಾರಿ ಮಾಡಿಕೊಂಡಿದೆ. ತೆಲುಗು ಸೇರಿದಂತೆ, ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಲ್ಲಿ ಈ ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗುತ್ತಿರುವುದರಿಂದ, ಆಯಾ ಭಾಷೆಯ ಪ್ರಸಿದ್ಧ ಕಲಾವಿದರು ಹಿನ್ನೆಲೆ ನಿರೂಪಣೆಗೆ ಧ್ವನಿ ನೀಡಲಿದ್ದಾರೆ. ಮಲಯಾಳಂನಲ್ಲಿ ಸುಪ್ರಸಿದ್ಧ ನಟ ಪೃಥ್ವಿರಾಜ್, ತೆಲುಗಿನಲ್ಲಿ ಖ್ಯಾತ ನಿರ್ದೇಶಕ ರಾಜಮೌಳಿ, ತಮಿಳಿನಲ್ಲಿ ಸುಕುಮಾರ್ ಹಿನ್ನೆಲೆ ನಿರೂಪಣೆ ಧ್ವನಿ ನೀಡುತ್ತಿರುವುದು ವಿಶೇಷ.   ಇದನ್ನೂ ಓದಿ : ನಿಜ ಜೀವನದಲ್ಲಿಯೂ ಹೀರೋಯಿನ್ ಆದ ಶ್ವೇತಾ ಶ್ರೀವಾತ್ಸವ್.

ಬಾಹುಬಲಿ ಸಿನಿಮಾದ ನಂತರ ಪ್ರಭಾಸ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದರು. ಈ ಸಿನಿಮಾದ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಭಾರೀ ಗಳಿಕೆ ಮಾಡಿತ್ತು. ಹಾಗಾಗಿ ಬಾಹುಬಲಿ ಚಿತ್ರದ ಮೂಲಕ ಪ್ರಭಾಸ್ ವಿದೇಶಗಳಲ್ಲೂ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಹಾಗಾಗಿ ದೇಶ ವಿದೇಶಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

Comments

Leave a Reply

Your email address will not be published. Required fields are marked *