ಜಮ್ಮು ಸೇನೆ ನೆಲೆ ಮೇಲೆ ದಾಳಿ: ಮೂವರು ಉಗ್ರರ ಹತ್ಯೆ, ಓರ್ವ ಸೈನಿಕ ಬಲಿ

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣದ ಸಮೀಪವಿರುವ ಬಿಎಸ್‍ಎಫ್ ಕ್ಯಾಂಪ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಿದ್ದು, ಮತ್ತೊಬ್ಬ ಉಗ್ರ ಒಳಗಡೆ ಅವಿತು ಕುಳಿತಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. ಪಾಕಿಸ್ತಾನ ಮೂಲದ ಜೈಶ್- ಈ- ಮೊಹಮ್ಮದ್ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಬೆಳಗ್ಗೆ 4 ಗಂಟೆಗೆ ಸೂಸೈಡ್ ಬಾಂಬ್ ಉಗ್ರರು ಕ್ಯಾಂಪ್ ಒಳಗಡೆ ನುಗ್ಗಿದ್ದಾರೆ. ಈಗ ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆಯಲ್ಲಿ ತೊಡಗಿವೆ.

ಉದ್ಯೋಗಿಗಳು, ಪ್ರಯಾಣಿಕರು, ವಾಹನಗಳಿಗೆ ವಿಮಾನ ನಿಲ್ದಾಣದಲ್ಲಿ ಅನುಮತಿ ನೀಡುತ್ತಿಲ್ಲ. ಎಲ್ಲಾ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

 


 

Comments

Leave a Reply

Your email address will not be published. Required fields are marked *