ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣಗೆ (SM Krishna) ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಓಲ್ಡ್ ಏರ್‌ಪೋರ್ಟ್‌‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣರನ್ನು ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಬುಲೆಟಿನ್ ಮೂಲಕ ತಿಳಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದುಬಂದಿಲ್ಲ.

ಏಪ್ರಿಲ್ 21ರಂದು ಎಸ್‌.ಎಂ ಕೃಷ್ಣರಿಗೆ ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ನಂತರ ಅವರು ಡಿಸ್ಟಾರ್ಜ್ ಸಹ ಆಗಿದ್ದರು. ಆದರೆ ಇಂದು ಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಎಸ್‌.ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ವಯೋಸಹಜ ಕಾರಣಗಳಿಂದ ಅವರು ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಮೋದಿ