ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ (Veerendra Patil) ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.

ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಶಾರದಾ ಪಾಟೀಲ (Sharadha Patil ) ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು.  ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ : ಯಶ್ ಹೊಸ ಸಿನಿಮಾ ಅಕ್ಟೋಬರ್ 19ಕ್ಕೆ

ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]