ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ

ಬಾಗಲಕೋಟೆ: ಮಾಜಿ ಸಚಿವ ಅರವಿಂದ ಲಿಂಬಾವಳಿ (Arvind Limbavali) ತಾಯಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಬಾಗಲಕೋಟೆ (Bagalkote) ನಗರದ ದೀಪಂ ಕಾಲೋನಿಯಲ್ಲಿ ಭೀಮಾಬಾಯಿ ಲಿಂಬಾವಳಿ(84) ನೆಲೆಸಿದ್ದರು. ಇಂದು ಬೆಳಗ್ಗೆ 4 ಗಂಟೆಗೆ ಅವರು ಮನೆಯಲ್ಲೇ ಮೃತಪಟ್ಟಿದ್ದಾರೆ.

ಇಂದು ಸಂಜೆ ತುಳಸಿಗೇರಿಯ ಹೊಲದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ. ಮೃತರಿಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇದನ್ನೂ ಓದಿ: ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ


ತಾಯಿಯ ಪ್ರೀತಿ, ಮಮತೆ ಮತ್ತು ಆಶೀರ್ವಾದ ನಮ್ಮ ಹೃದಯದಲ್ಲಿ ಸದಾ ಹಸಿರಾಗಿರುತ್ತದೆ. ಜೀವನದಲ್ಲಿ ಅವರು ಕಲಿಸಿದ ಸರಳತೆ ಮತ್ತು ನೀತಿ ಪಾಠಗಳು ನನಗೆ ಸನ್ಮಾರ್ಗದಲ್ಲಿ ನಡೆಯಲು ಸದಾ ಪ್ರೇರಣೆ ನೀಡುತ್ತಿರುತ್ತವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಕೋರುತ್ತೇನೆ ಎಂದು ಲಿಂಬಾವಳಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.