ನಿಮಗಾಗಿ ಎಲ್ಲರ ವಿರೋಧ ಕಟ್ಕೊಂಡೆ, ಅದೇ ಕಾರಣಕ್ಕೆ ನನಗೆ ಮಂತ್ರಿಗಿರಿ ಸಿಗ್ಲಿಲ್ಲ: ಎಂ.ಬಿ.ಪಾಟೀಲ್

-ಸಿದ್ದುಗೆ ಧರ್ಮ ಸಂಕಟ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಧರ್ಮ ಸ್ಥಾನಮಾನ ನೀಡುವಂತೆ ಶಿಫಾರಸ್ಸು ಮಾಡಿ ಹಿಂದೂ ಧರ್ಮ ಒಡೆದರು ಎಂದು ವಿರೋಧ ಪಕ್ಷಗಳ ಆರೋಪಕ್ಕೆ ಗುರಿಯಾಗಿದ್ದಾರೆ. ಇತ್ತ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ನೇತೃತ್ವವಹಿಸಿದ್ದ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

ಇತ್ತ ಸಚಿವ ಸ್ಥಾನದಿಂದ ವಂಚಿತರಾಗಿರುವ ಎಂ.ಬಿ.ಪಾಟೀಲ್, ನಿಮಗಾಗಿಯೇ ನಾನು ಎಲ್ಲರ ವಿರೋಧ ಕಟ್ಟಿಕೊಂಡಿದ್ದೇನೆ. ಸಮಾಜದ ಮುಖಂಡರನ್ನು ಎದುರು ಹಾಕಿಕೊಂಡು ಕೆಲಸ ಮಾಡಿದ್ದೇನೆ. ಇಂದು ಧರ್ಮ ಒಡೆದಿದ್ದೇನೆ ಎಂದು ಹೇಳಿ ನನಗೆ ಸಂಪುಟದಲ್ಲಿ ಸ್ಥಾನ ನೀಡಿಲ್ಲ. ಹೀಗಾಗಿ ನೀವೇ ಸಚಿವ ಸ್ಥಾನ ನೀಡುವಂತೆ ಮಾಡಬೇಕು ಸಿದ್ದರಾಮಯ್ಯರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ಸಿದ್ದರಾಮಯ್ಯರನ್ನು ಭೇಟಿಯಾಗಿ ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತಿದ್ದು, ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬೇಕು ಎಂದು ಒತ್ತಡ ಹಾಕಿದ್ದಾರಂತೆ. ಸಿದ್ದರಾಮಯ್ಯ ತಮಗಿರುವ ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಬಳಸಿ ಎಂ.ಬಿ.ಪಾಟೀಲ್‍ರನ್ನು ಸಂಪುಟದಲ್ಲಿ ಸೇರುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *