ಗುಡ್ಡಕ್ಕೆ ಶಕ್ತಿ ಹೊರುವ ತಾಕತ್ತು ಇದೆ ಬಿಡಿ – ಸೋಲಿನ ಆರೋಪಕ್ಕೆ ರಮೇಶ್ ಖಡಕ್ ಉತ್ತರ

ಚಿಕ್ಕೋಡಿ(ಬೆಳಗಾವಿ): ಗುಡ್ಡಕ್ಕೆ ಶಕ್ತಿ ಹೊರುವ ತಾಕತ್ ಇದೆ ಬಿಡಿ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ಬಿಜೆಪಿ ಸೋಲಲು ತನ್ನ ಮೇಲಿನ ಆರೋಪಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಗೋಕಾಕ್ ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಸೋಲನ್ನ ರಮೇಶ್ ಜಾರಕಿಹೊಳಿ ತಲೆಗೆ ಕಟ್ಟುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಂಚು ನಡೆದುದರ ಬಗ್ಗೆ ಕನ್ಫರ್ಮ್ ಇಲ್ಲ ವಿಚಾರ ಮಾಡಿ ಮಾತಾಡುತ್ತೇನೆ. ಸೋಲಿನ ಪಟ್ಟವನ್ನು ಲೀಡರ್ ಆದವರಿಗೆ ಕಟ್ಟುತ್ತಾರೆ. ನಾನು ಕಾಂಗ್ರೆಸ್ ಸೋಲಿಸುತ್ತೇನೆ ಅಂತಾ ಹಠಕ್ಕೆ ಬಿದ್ದಿದ್ದು ನಿಜ. ಇವತ್ತು ಅವರ ಪಕ್ಷ ಗೆದ್ದಿದೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಎಲ್ಲಿ ತಪ್ಪಿದೆ ಎಂಬುದು ಆಂತರಿಕವಾಗಿ ಚರ್ಚೆ ಮಾಡುತ್ತೇವೆ. ಕೆಲವೇ ದಿನಗಳಲ್ಲಿ ಬಹಿರಂಗವಾಗಿ ಡಿಕೆಶಿ ಹೇಳಿಕೆ ಬಗ್ಗೆ ಕಠೋರ ಉತ್ತರ ಕೊಡುತ್ತೇನೆ ಎಂದರು. ಇದನ್ನೂ ಓದಿ: ನಮ್ಮಂತವರನ್ನು ನೆಗ್‍ಲೆಕ್ಟ್ ಮಾಡ್ತಾರೆ, ಬೇಕಾದಾಗ ಕರೀತಾರೆ ಬೇಡವಾದ್ರೆ ಕರಿಯಲ್ಲ: ಯತ್ನಾಳ್

ನಮ್ಮ ಪಕ್ಷದಲ್ಲಿ ಏನಾಗಿದೆ ಎನಿಲ್ಲ ಎಂಬುದು ನಮ್ಮ ವರಿಷ್ಠರ ಜೊತೆಗೆ ಮಾತನಾಡಿದ್ದೇನೆ. ಯಾಕೆ ಸೋತಿದೆ ಎಂಬುದು ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಬಿಜೆಪಿಗೆ ಹೋಗುವ ಕುರಿತು ಲಖನ್ ಜಾರಕಿಹೊಳಿ ತೀರ್ಮಾನ ತೆಗೆದುಕೊಳ್ಳಬೇಕು. ಲಖನ್ ಜಾರಕಿಹೊಳಿ ಕೊನೆಯ ಮೂರು ದಿನ ನಮ್ಮ ಕೈಗೆ ಸಿಗಲಿಲ್ಲ. ಚುನಾವಣೆ ಚಿತ್ರಣ ಬದಲಾಗಿದ್ದಕ್ಕೆ ನಾನು ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಅವರು ಮಾಡಿದ್ರು ಎಂದು ಹೇಳಿದರು. ಇದನ್ನೂ ಓದಿ: ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ರಮೇಶ್ ಜಾರಕಿಹೊಳಿ ಬಗ್ಗೆ ಕ್ರಮ ಕೈಗೊಳ್ಳಿ ಅಂತಾ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ, ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಒಬ್ಬ ಹಿಂದುಳಿದ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ನನಗೆ ಚ್ಯುತಿ ಬರುತ್ತೆ ಅಂತಾ ಹೆದರಿದ್ದಾರೆ. ಸಿದ್ದರಾಮಯ್ಯ ಅವರನ್ನು ಕುರುಬರೆಲ್ಲರೂ ರಿಜೆಕ್ಟ್ ಮಾಡಿದ್ದಾರೆ. ಸಿದ್ದರಾಮಯ್ಯ ವೆಸ್ಟ್ ಬಾಡಿ. ಸಿದ್ದರಾಮಯ್ಯ ಕಥೆ ಮುಗಿದಿದೆ ಮುಂದಿನ ಸಾರಿ ಆ ಮನುಷ್ಯ ಸೋಲುತ್ತಾನೆ ಎಂದು ವಾಗ್ದಾಳಿ ನಡೆಸಿದರು.

Comments

Leave a Reply

Your email address will not be published. Required fields are marked *