ಬಾಗಲಕೋಟೆ: ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ(85) ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬಾಬುರೆಡ್ಡಿ ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ವಿಧಿವಶರಾಗಿದ್ದಾರೆ.
1985 ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ ಬಾಬುರೆಡ್ಡಿ ತುಂಗಳ ಅವರು ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಆಗಿದ್ದರು. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸ್ವಗ್ರಾಮ ಬಿದರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.
ಬಾಬುರೆಡ್ಡಿ ತುಂಗಳ ಅವರು ಹುಟ್ಟು ಹೋರಾಟಗಾರರಾಗಿದ್ದರು. ಅಲ್ಲದೇ ಅತ್ಯುತ್ತಮ ವಾಗ್ಮಿ ಕೂಡ ಆಗಿದ್ದರು. ಬಾಬುರೆಡ್ಡಿ ಅವರ ಭಾಷಣ ಆಲಿಸಲೆಂದು ಸಾಕಷ್ಟು ಜನರು ಬರುತ್ತಿದ್ದರು. ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಇರುವ ಶ್ರಮಬಿಂದು ಸಾಗರ ಬ್ಯಾರೇಜನ್ನು ದಿವಂಗತ ಶಾಸಕ ಸಿದ್ದು ನ್ಯಾಮಗೌಡರ ನೇತೃತ್ವದಲ್ಲಿ ನಿರ್ಮಾಣ ಮಾಡಲಾಗಿತ್ತು. ಬಾಬುರೆಡ್ಡಿ ತುಂಗಳ ಅವರು ಈ ಬ್ಯಾರೇಜ್ ನಿರ್ಮಾಣದ ಹೊಣೆ ಹೊತ್ತಿದ್ದ ಕೃಷ್ಣಾ ತೀರದ ರೈತ ಸಂಘದ ಮೊದಲ ಅಧ್ಯಕ್ಷರಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply