ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

ನವದೆಹಲಿ: ಪಾಕಿಸ್ತಾನದ ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾಗೆ ರಹಸ್ಯ ದಾಖಲೆ ನೀಡಿದ ಆರೋಪದಡಿ ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್ ನೇಗಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.

ನೇಗಿ ಎನ್‍ಐಎ ತನಿಖಾಧಿಕಾರಿಯಾಗಿದ್ದಾಗ ಲಷ್ಕರ್ ಇ ತೊಯ್ಬಾಗೆ ಕೆಲವು ರಹಸ್ಯ ಮಾಹಿತಿಗಳನ್ನು ನೀಡಿದ್ದರು ಎಂಬ ಆರೋಪವಿದೆ. ಅಲ್ಲದೇ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದರು ಎಂಬ ಅಂಶ ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಎನ್‍ಐಎ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!

ಕಳೆದ ವರ್ಷ ಉಗ್ರರಿಗೆ ರಹಸ್ಯ ಮಾಹಿತಿ ನೀಡಿದ ಆರೋಪದಡಿ ಜಮ್ಮು ಕಾಶ್ಮೀರದ ಮಾನವ ಹಕ್ಕುಗಳ ಹೋರಾಟಗಾರ ಖುರ್ರಂ ಪರ್ವೇಜ್‍ರನ್ನು ಎನ್‍ಐಎ ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ನೇಗಿ ಹೆಸರು ಕೂಡ ಈ ಪ್ರಕರಣದಲ್ಲಿ ಕೇಳಿಬಂದಿತ್ತು. ಎನ್‍ಐಎ ತನಿಖಾಧಿಕಾರಿಯಾಗಿದ್ದ ನೇಗಿ ಪ್ರಸ್ತುತ ಶಿಮ್ಲಾದ ಎಸ್‍ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನೇಗಿ 2007ರಲ್ಲಿ ಅಜ್ಮೀರ್ ದರ್ಗಾ ಸ್ಫೋಟ ಸೇರಿದಂತೆ ಹಲವು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯಾಗಿದ್ದರು. ಇದೀಗ ಉಗ್ರರಿಗೆ ರಹಸ್ಯ ಮಾಹಿತಿ ನೀಡಿದ ಆರೋಪದಡಿ ಎನ್‍ಐಎ ಐಪಿಸಿ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ) 121 (ಸರ್ಕಾರದ ವಿರುದ್ಧ ನಡೆ) 17 (ಭಯೋತ್ಪಾದಕ ಕೃತ್ಯಕ್ಕೆ ನಿಧಿ ಸಂಗ್ರಹ) ಸೆಕ್ಷನ್ ಅಡಿ ಎನ್‍ಐಎ ಅರೆಸ್ಟ್ ಮಾಡಿದೆ. ದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

Comments

Leave a Reply

Your email address will not be published. Required fields are marked *