ಮಂಗಳೂರು: ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಕ್ತಪಾತವಾಗುತ್ತಿದೆ. ಮಮತಾ ಬ್ಯಾನರ್ಜಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ನನಗೆ ಬದುಕಬೇಕೆಂಬ ಆಸೆ ಇಲ್ಲ. ರಾಜ್ಯದ ಜನರಿಗೋಸ್ಕರ ನಾನು ಜನರಿಗೋಸ್ಕರ ಸಾಯುತ್ತೇನೆ. ಮೋದಿಯವರು ನನ್ನ ಬಂಗಾಳದ ಜನರನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ. ಈ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕೆಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

ಮಮತಾಗೆ ಬೆಂಬಲ ಸೂಚಿಸಿ ತಾನೂ ಕುದ್ರೋಳಿ ದೇವಸ್ಥಾನದಲ್ಲಿ ಉಪವಾಸ ಕೂರೋದಾಗಿ ಮೊದಲು ಹೇಳಿದ ಜನಾರ್ದನ ಪೂಜಾರಿ ನಂತರ ದಿಢೀರ್ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಉಪವಾಸದ ನಿರ್ಧಾರ ಕೈಗೊಳ್ಳೋದಾಗಿ ಸ್ಪಷ್ಟಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply