ರಾಯಚೂರು: ವಿದ್ಯುತ್ ಕಂಬ ಸಾಗಣೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರಿನ ಶ್ರೀಪುರಂ ಜಂಕ್ಷನ್‍ನಲ್ಲಿ ನಡೆದಿದೆ.
ನಾಗರಾಜ್ (35), ರಮೇಶ್(25), ಶರಣಪ್ಪ(19) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅಪಘಾತದಲ್ಲಿ ಗಾಯಗೊಂಡಿದ್ದ ಮಲ್ಲಿಕಾರ್ಜನ್ (30) ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಸಿಂಧನೂರಿನ ಸರ್ಕಾರಿ ಆಸ್ಪತೆಗೆ ದಾಖಲಿಸಲಾಗಿದೆ.

ವಿದ್ಯುತ್ ಕಂಬ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ ಟ್ರಾಲಿ ಪಲ್ಟಿ ಹೊಡೆದು ಕಾರಣ ವಿದ್ಯುತ್ ಕಂಬಗಳು ಕಾರ್ಮಿಕರ ಮೇಲೆ ಬಿದ್ದು ಈ ಅನಾಹುತ ಸಂಭವಿಸಿದೆ. ಮೃತರು ಕೊಪ್ಪಳದ ಸುಳೆಕಲ್ ಮೂಲದವರು ಎನ್ನಲಾಗಿದ್ದು. ಸಾಸಲಮರಿ ಕ್ಯಾಂಪ್‍ನಿಂದ ಸಿಂಧನೂರು ಮಧ್ಯೆ ವಿದ್ಯುತ್ ಕಂಬ ಅಳವಡಿಕೆ ಕಾರ್ಯಕ್ಕೆ ಸಾಗಾಣೆ ಮಾಡಲಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಿಂಧನೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply