ಪತ್ರಕರ್ತನನ್ನು ಕೂಡಲೇ ಬಿಡುಗಡೆ ಮಾಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಚಾಟಿ

ನವದೆಹಲಿ: ಬಂಧನಕ್ಕೆ ಒಳಗಾದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಚಾಟಿ ಬೀಸಿದೆ.

ಟ್ವೀಟ್ ಮಾಡಿದ್ದಾರೆ ಎಂದು ಬಂಧಿಸುವುದು ಎಷ್ಟು ಸರಿ? ಯಾವ ಆಧಾರದಲ್ಲಿ ಬಂಧನ ಮಾಡಲಾಗಿದೆ? ಕೊಲೆ ಮಾಡಲಾಗಿದ್ಯಾ ಎಂದು ಪ್ರಶ್ನಿಸಿ ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಸಾಧಾರಣವಾಗಿ ನಾವು ಈ ರೀತಿಯ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ. ಆದರೆ ಒಬ್ಬ ವ್ಯಕ್ತಿ 11 ದಿನಗಳ ಕಾಲ ಜೈಲಿನಲ್ಲಿ ಇರಲು ಸಾಧ್ಯವಿಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಪ್ರಶಾಂತ್ ಕನೋಜಿಯಾ ವಿರುದ್ಧ ಹಜರತ್ ಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪತಿಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕನೋಜಿಯಾ ಅವರ ಪತ್ನಿ ಸುಪ್ರೀಂನಲ್ಲಿ ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದರು.

ಮುಖ್ಯಮಂತ್ರಿಗಳ ಕಚೇರಿ ಎದುರು ನಿಂತು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಮಹಿಳೆಯೊಬ್ಬರು ಮುಖ್ಯಮಂತ್ರಿಗಳಿಗೆ ಮದುವೆ ಪ್ರಸ್ತಾವನೆ ಕಳಿಸಿದ್ದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋವನ್ನು ಕನೋಜಿಯಾ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಹಂಚಿಕೊಂಡು ಸಿಎಂ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.

Comments

Leave a Reply

Your email address will not be published. Required fields are marked *