ಎಚ್.ಎಸ್ ದೊರೆಸ್ವಾಮಿಗೆ ಪತ್ನಿ ವಿಯೋಗ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರ ಪತ್ನಿ ಇಂದು ನಿಧನರಾಗಿದ್ದಾರೆ.

ನಗರದ ಜಯದೇವ ಆಸ್ಪತ್ರೆಯಲ್ಲಿ ಲಲಿತಮ್ಮ (89) ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

ಕಳೆದ 2 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಲಲಿತಮ್ಮ ಅವರಿಗೆ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಜಯನಗರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಬ್ಬರು ಮಕ್ಕಳನ್ನ ಲಲಿತಮ್ಮ ಅಗಲಿದ್ದಾರೆ.

ಕಿಮ್ಸ್ ಆಸ್ಪತ್ರೆಗೆ ದೇಹವನ್ನ ದಾನ ಮಾಡಲು ಕುಟುಂಬಸ್ಥರು ತೀರ್ಮಾನ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *