ಗದಗ್‍ನಲ್ಲಿ ವೃದ್ಧನಿಗೆ ಕೊರೊನಾ- ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿಯೇ ಇಲ್ಲದ 75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಸೋಂಕಿತ ವೃದ್ಧನಿಗೆ(ರೋಗಿ-514)ಗೆ ಯಾರ ಸಂಪರ್ಕವೂ ಇರಲಿಲ್ಲ. ಹೆಲ್ತ್ ಇನ್ಸ್ ಪೆಕ್ಟರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರು ನಗರದ ಗಂಜಿಬಸವೇಶ್ವರ ಸರ್ಕಲ್ ಬಳಿ ನಿವಾಸಿಯಾಗಿದ್ದು, ಮನೆಯಲ್ಲಿ ಸೋಂಕಿತ ವ್ಯಕ್ತಿ ಸೇರಿಸಿ ಒಟ್ಟು 9 ಮಂದಿ ಸದಸ್ಯರು ವಾಸವಿದ್ದರು. ಮನೆಯಲ್ಲಿದ್ದ 8 ಜನರ ವರದಿಗಳು ಸದ್ಯ ನೆಗೆಟಿವ್ ಎಂದು ಬಂದಿವೆ.

ಪ್ರಾಥಮಿಕ ಸಂರ್ಪಕದಲ್ಲಿದ್ದ 24 ಜನರನ್ನು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಗುರುತಿಸಿದೆ. ಅವರನ್ನ ಕೊರೊನಾ ಆಸ್ಪತ್ರೆಗೆ ರವಾನಿಸಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಇದೂವರೆಗೆ ಒಟ್ಟು 5ನೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ 80 ವರ್ಷದ ವೃದ್ಧೆ(ರೋಗಿ-166) ಮೃತಪಟ್ಟಿದ್ದಾರೆ.

ಉಳಿದ ನಾಲ್ಕು ಜನರು ಗದಗ ಜಿಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ 8 ದಿನಗಳ ನಂತರ ಮತ್ತೊಂದು ಪಾಸಿಟಿವ್ ಕೇಸ್ ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ನಗರದ ಗಂಜಿ ಬಸವೇಶ್ವರ ಸರ್ಕಲ್ ಬಳಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Comments

Leave a Reply

Your email address will not be published. Required fields are marked *