9 ದಿನ ಗಣೇಶೋತ್ಸವ ಆಚರಿಸುತ್ತೇವೆ ತಾಖತ್ ಇದ್ರೆ ಸರ್ಕಾರ ತಡೆಯಲಿ: ಶ್ರೀರಾಮಸೇನೆ

ಗದಗ: ಗಣೇಶೋತ್ಸವ ಆಚರಣೆಗೆ ಅಡೆತಡೆ ಮಾಡಿ ನಿಮ್ಮ ಲಾಠಿ ಏಟು ಹಾಗೂ ಬಂದೂಕಿನ ಗುಂಡಿಗೂ ಹೆದರುವುದಿಲ್ಲ. ನಿಮ್ಮ ಗುಂಡಿಗೆ ನಮ್ಮ ಎದೆ ಗುಂಡಿಗೆ ಒಡ್ಡಲು ಸಿದ್ದರಿದ್ದೇವೆ. ಯಾವುದಕ್ಕೂ ಬಗ್ಗುವ ಜಗ್ಗುವ ಮಾತೇ ಇಲ್ಲ. ತಾಖತ್ ಇದರೆ ಆಚರಣೆ ತಡೆಯಲಿ ಎಂದು ಶ್ರೀ ರಾಮಸೇನೆ ಸಂಘಟಿಕರು ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

 sri rama sene

9 ದಿನದ ಗಣೇಶೋತ್ಸವ ಆಚರಣೆಗೆ ಅವಕಾಶ ಕೊಡುವಂತೆ ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ಡಿಸಿ ಆಫೀಸ್ ಬಳಿ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿ, ಕೂಡಲೇ ಗಣೇಶ ಹಬ್ಬದ ಮಾರ್ಗಸೂಚಿಗಳ ಪರಿಷ್ಕರಣೆ ಆಗಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

 sri rama sene

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ 5 ದಿನದ ಬದಲು ಜಿಲ್ಲೆಯಾದ್ಯಂತ 9 ದಿನ ಆಚರಿಸಲು ಶ್ರೀರಾಮಸೇನೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಸರ್ಕಾರ ಸಹಕಾರ ನೀಡಬೇಕು. ಜೊತೆಗೆ ಶಾಲಾ-ಕಾಲೇಜುಗಳಲ್ಲೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಸಂಘಟಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೋಚಲು ಹಣವಿಲ್ಲದಾಗ ಹಲ್ಲೆಗೈದು ರೇಪ್ ಮಾಡಿದೆವು – ಸತ್ಯ ಬಿಚ್ಚಿಟ್ಟ 7ನೇ ಆರೋಪಿ

 sri rama sene

ಶ್ರೀರಾಮಸೇನೆ ಧಾರವಾಡ ವಿಭಾಗದ ಸಂಚಾಲಕ ರಾಜು ಖಾನಪ್ಪನವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಅನೇಕ ಕಾರ್ಯಕರ್ತರು ಈ ಧರಣಿಯಲ್ಲಿ ಭಾಗವಹಿಸಿದ್ದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

Comments

Leave a Reply

Your email address will not be published. Required fields are marked *