ಸಿನಿಮಾ ಶುರುವಾಗೋ ಮೊದಲೇ ಗಣೇಶ್ ಮನೆಮುಂದೆ ನಿಂತಿತು ಕಟೌಟ್!

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈಗ ‘ಗೀತಾ’ ಸಿನಿಮಾದಲ್ಲಿ ನಟಿಸಲು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಸಿನಿಮಾ ಸೆಟ್ಟೇರುವ ಮೊದಲೇ ಗೋಲ್ಡನ್ ಸ್ಟಾರ್ ನಿವಾಸದ ಮುಂದೆ ದೊಡ್ಡ ಕಟೌಟ್ ನಿಲ್ಲಿಸಲಾಗಿದೆ.

ಈ ಹಿಂದೆ ಗೀತಾ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಆದರೆ ಈಗ ಸೆಟ್ಟೇರುವ ಮೊದಲೇ ಗಣೇಶ್ ಮನೆ ಮುಂದೆ ಸಿನಿಮಾದ ದೊಡ್ಡ ಕಟೌಟ್ ಅನ್ನು ಅಭಿಮಾನಿಗಳು ನಿಲ್ಲಿಸಿದ್ದಾರೆ.

ಇದೇ ಮೊದಲ ಬಾರಿಗೆ ಸಿನಿಮಾ ಸೆಟ್ಟೇರುವ ಮೊದಲೇ ನಟರೊಬ್ಬರ ಕಟೌಟ್ ನಿಲ್ಲಿಸಿ ಅಭಿಮಾನಿಗಳು ಆಚರಣೆ ನಡೆಸಿದ್ದಾರೆ. ಸದ್ಯ ಗಣೇಶ್ ಇತ್ತೀಚಿನ ದಿನಗಳಲ್ಲಿ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ಹೊಸತನವನ್ನು ಪ್ರಯತ್ನಿಸುತ್ತಿದ್ದಾರೆ. ಈ ಚಿತ್ರದ ಟೈಟಲ್ ಅನೌನ್ಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಹುಟ್ಟು ಹಾಕಿದೆ. ಸಿನಿಮಾದ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿದ್ದು, ಗಣೇಶ್ ಅವರು ಈ ಚಿತ್ರಕ್ಕಾಗಿ ಹೊಸ ಲುಕ್ ನಲ್ಲಿ ಪ್ರಯತ್ನಿಸಿದ್ದಾರೆ.

ಜುಲೈ 2ರಂದು ಗಣೇಶ್ ಹುಟ್ಟುಹಬ್ಬ ನಡೆಯಲಿದ್ದು, ಈ ಸಂದರ್ಭದಲ್ಲಿ ಗೋಲ್ಟನ್ ಸ್ಟಾರ್ ನಟನೆಯ ‘ಆರೆಂಜ್’ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

Comments

Leave a Reply

Your email address will not be published. Required fields are marked *