ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

ಲಕ್ನೋ: ಪಾತಕಿ, ಮಾಜಿ ಸಂಸದ ಅತೀಕ್‌ ಅಹ್ಮದ್‌ (Atiq Ahmad) ಹಾಗೂ ಆತನ ಸಹೋದರನನ್ನು ಪೊಲೀಸರ ಎದುರೇ ಗುಂಡಿಟ್ಟು ಹತ್ಯೆಗೈದವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹತ್ಯೆ ಮಾಡಿದ ಆರೋಪಿಗಳಾದ ಲವ್ಲೇಶ್‌ ತೆವಾರಿ, ಸನ್ನಿ ಸಿಂಗ್‌, ಅರುಣ್‌ ಮೌರ್ಯ ಮೂವರನ್ನು ಪೊಲೀಸರು ಕೋರ್ಟ್‌ (Court) ಮುಂದೆ ಹಾಜರು ಪಡಿಸಿದ್ದರು. ಅವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇದನ್ನೂ ಓದಿ: ತಾಯಿಯ ಶಿರಚ್ಛೇದ ಮಾಡಿದ್ದ ಮಗನಿಗೆ ಮರಣದಂಡನೆ ವಿಧಿಸಿದ ಕೋರ್ಟ್ 

ಅಹ್ಮದ್ ಗ್ಯಾಂಗ್ ಅನ್ನು ನಿರ್ಮೂಲನೆ ಮಾಡುವ ಮೂಲಕ ತಾವು ಹೆಸರು ಗಳಿಸಲು ಬಯಸಿದ್ದೇವೆ ಎಂದು ಮೂವರು ದುಷ್ಕರ್ಮಿಗಳು ಹೇಳಿಕೊಂಡಿದ್ದಾರೆ. ಅವರು ಕೊಲೆಯನ್ನು ಎಚ್ಚರಿಕೆಯಿಂದ ಯೋಜಿಸಿದ್ದರು. ಶನಿವಾರ ಇಡೀ ದಿನ ಪೊಲೀಸರ ವಶದಲ್ಲಿದ್ದ ಅಹ್ಮದ್‌ನನ್ನು ಹಿಂಬಾಲಿಸಿದ್ದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅತಿಕ್, ಅಶ್ರಫ್ ಹತ್ಯೆ – ಮೂವರು ಹಂತಕರ ಬಂಧನ, ಯುಪಿಯಲ್ಲಿ ಹೈ ಅಲರ್ಟ್ 

ಪ್ರಯಾಗ್‌ ರಾಜ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದ ವೇಳೆ ಏಕಾಏಕಿ ದಾಳಿ (Attack) ನಡೆಸಿದ ದುಷ್ಕರ್ಮಿಗಳು ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್‌ (Ashraf) ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಅತೀಕ್‌ ಮತ್ತು ಅಶ್ರಫ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಪ್ರಯಾಗರಾಜ್‌ನಲ್ಲಿರುವ (Prayagraj) ಅವರ ಗ್ರಾಮದಲ್ಲಿ ಹೂಳಲಾಯಿತು. ಇದನ್ನೂ ಓದಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯ – ಯುವತಿ ನೇಣು ಬಿಗಿದು ಆತ್ಮಹತ್ಯೆ 

ಪ್ರಕರಣದ ಗಂಭೀರತೆ ಅರಿತ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಉತ್ತರ ಪ್ರದೇಶದ (Uttar Pradesh) ಪ್ರಯಾಗರಾಜ್ ಜಿಲ್ಲೆಯಲ್ಲಿ ಭಾನುವಾರ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ರಾಜ್ಯದಾದ್ಯಂತ ಬೃಹತ್‌ ಸಭೆ ಆಯೋಜನೆಯನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ಗೆ ಬಲಿ